NEWS

ಡಿ. 21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ : ವಿಶ್ವನಾಥ್

ಪಾಲನೆ ನ್ಯೂಸ್

ಮಂಡ್ಯ : ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಡಿಸೆಂಬರ್ 21 ರಿಂದ 24 ರವರೆಗೆ ಹಮ್ಮಿಕೊಂಡಿದ್ದು ಪೋಲಿಯೊ ಗುರಿ ತಲುಪಿಸುವ ಸಂಬಂಧ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕು ಎಂದು ತಹಶೀಲ್ದಾರ್ ವಿಶ್ವನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಂದು ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಜರುಗಿದ ಪಲ್ಸ್ ಪೋಲಿಯೋ ಸಂಬಂಧ ನೆಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಸದರಿ ಕಾರ್ಯಕ್ಕೆ ನಿಯೋಜನೆಗೊಂಡ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ ಆಶಾ ಕಾರ್ಯಕರ್ತೆಯರು ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಡಿಸೆಂಬರ್ 21ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ನಗರದ ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಕರೆ ನೀಡಿದರು.

ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸದರಿ ದಿನದಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಬೂತ್ ಮಟ್ಟದಲ್ಲಿ ಲಸಿಕೆ ನೀಡಲಾಗುತ್ತದೆ. ಡಿಸೆಂಬರ್ 22 ರಿಂದ ಡಿಸೆಂಬರ್ 24 ರವರೆಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಯಾವುದೇ ಮಗು ಲಸಿಕೆಯಿಂದ ಹೊರಗುಳಿಯಬಾರದು.ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ, ಹೊಲಗಳಲ್ಲಿ ವಾಸಿಸುತ್ತಿರುವ ಮಕ್ಕಳು, ಕೂಲಿ ಕೆಲಸಕ್ಕೆ ತೆರಳುವ ಕಾರ್ಮಿಕರ ಮಕ್ಕಳಿಗೂ ಗಮನಹರಿಸಿ ಪೋಲಿಯೋ ಲಸಿಕೆ ನೀಡಬೇಕು ಎಂದರು.

ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ.ಕೆ.ಪಿ.ಅಶ್ವಥ್ ಮಾತನಾಡಿ ಜಿಲ್ಲೆಯಲ್ಲಿ 1,16,724 ಐದು ವರ್ಷದೊಳಗಿನ ಮಕ್ಕಳು ಇದ್ದು, ಒಟ್ಟು 723 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತದೆ. 1446 ತಂಡಗಳನ್ನು ರಚಿಸಲಾಗಿದ್ದು, ಮೊಬೈಲ್ ತಂಡ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಟ್ರಾನ್ಸಿಟ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. 2,892 ಲಸಿಕಾ ಕಾರ್ಯಕರ್ತರನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 147ಮೇಲ್ವಿಚಾರಕರನ್ನು ಗುರುತಿಸಲಾಗಿದೆ.ಇವರುಗಳಿಗೆ ಈಗಾಗಲೇ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಿಂದ ತರಬೇತಿ ನೀಡಲಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಡಾ. ಮೀರಾ ಶಿವಲಿಂಗಯ್ಯ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಜವರೇಗೌಡ, ಸಿ ಡಿ ಪಿ ಓ ಕುಮಾರಸ್ವಾಮಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.

Related posts

ಸ್ಮೃತಿ ಪಡೆಗೆ 2ನೇ ಪ್ರಶಸ್ತಿ ತವಕ | ಕ್ಯಾಪಿಟಲ್ಸ್‌ಗೆ ಒಲಿಯುವುದೇ ಲಕ್?

ಗುಂಡ್ಲುಪೇಟೆ, ಮೈಸೂರಿನಲ್ಲಿ ನಾಗರಹೊಳೆ, ಬಂಡಿಪುರ ಸಫಾರಿ ಪುನಾರಂಭಕ್ಕೆ ರೈತರಿಂದ ವಿರೋಧ

ವೆನೆಜುವೆಲಾ: 6ನೇ ತೈಲ ಟ್ಯಾಂಕ‌ರ್ ವಶಕ್ಕೆ ಪಡೆದ ಅಮೆರಿಕ

Leave a Comment