NEWS

ವಿಶ್ವಮಾನವ ದಿನಾಚರಣೆ ಹಾಗೂ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ:ಬಿ.ಸಿ ಶಿವಾನಂದ ಮೂರ್ತಿ

ಪಾಲನೆ ನ್ಯೂಸ್

ಡಿಸೆಂಬರ್ 29 ರಂದು ವಿಶ್ವಮಾನವ ದಿನಾಚರಣೆ ಹಾಗೂ ಜನವರಿ 1 ರಂದು ನಡೆಯಲಿರುವ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ ಅವರ ಹೇಳಿದರು.‌

ಮಹಾನ್ ವ್ಯಕ್ತಿಗಳ ಜಯಂತಿಯ ಆಚರಣೆಯ ಮೂಲ ಉದ್ದೇಶ ಅವರ ಆದರ್ಶ ಮತ್ತು ಕೊಡುಗೆಯನ್ನು ಸಾರುವ ಉದ್ದೇಶದಿಂದ ಆಚರಿಸಲಾಗುವುದು. ಎಲ್ಲರೂ ಒಗ್ಗಟ್ಟಿನಿಂದ ಜಯಂತಿಗಳನ್ನು ಆಚರಣೆ ಮಾಡಿದರೆ ಮಹಾನ್ ಚೇತನರ ಜಯಂತಿಗಳಿಗೆ ಮೆರಗು ಬರುತ್ತದೆ ಎಂದು ಹೇಳಿದರು.

ಡಿಸೆಂಬರ್ 29 ರಂದು ವಿಶ್ವಮಾನವ ದಿನಾಚರಣೆಯನ್ನು ಮಂಡ್ಯ ವಿಶ್ವವಿದ್ಯಾಲಯದಲ್ಲಿ ಆಚರಿಸಿ. ಕಾರ್ಯಕ್ರಮಕ್ಕೂ ಮುನ್ನ ನಗರದ ಎ.ಪಿ.ಎಂ.ಸಿ ಆವರಣದಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ವಿಶ್ವ ವಿದ್ಯಾಲಯ ಮಟ್ಟದಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ಇಬ್ಬರೂ ವಿದ್ಯಾರ್ಥಿಗಳಿಗೂ ಸಮ್ಮಾನ ಮಾಡಿ. ಸಂಪನ್ಮೂಲ ವ್ಯಕ್ತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಚಿಂತನೆ ಮತ್ತು ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಲು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು  ಆಯೋಜಿಸಿ ಎಂದು ಸೂಚಿಸಿದರು.

ಜನವರಿ 1 ರಂದು ನಡೆಯಲಿರುವ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ನಗರದ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗುವುದು. ಜಿಲ್ಲಾಧಿಕಾರಿಗಳ ಕಚೇರಿಯಿಂದ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದವರೆಗೂ ಮೆರವಣಿಗೆ ಹೊರಡಲಿದೆ .ಮಾರ್ಗಸೂಚಿಯಂತೆ ವೇದಿಕೆಯಲ್ಲಿ ಆಹ್ವಾನಿತ ಗಣ್ಯರು ಮಾತ್ರ ಇರಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಜಯಂತಿಯನ್ನು ಆಚರಿಸುವಂತೆ ಸೂಚನೆ ನೀಡಿ ಎಂದು ಹೇಳಿದರು.

ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ನೀಡಲಾಗುವ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಸದರಿ ಕಾರ್ಯಕ್ರಮದಲ್ಲಿ ಆಯೋಜಿಸಿ ಎಂದು ಸೂಚಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ವಿ ನಂದೀಶ್ ಹಾಗೂ ಸಮುದಾಯ ಮುಖಂಡರುಗಳು ಉಪಸ್ಥಿತರಿದ್ದರು.

Related posts

ಪೆಟ್ರೋಲ್‌ ಬೆಲೆಯಲ್ಲಿ ಏರಿಕೆ

ಕಾಡ್ತಿಚ್ಚು ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಿ : ಖಂಡ್ರೆ

ನುಡಿಭಾರತಿ ಸೌಹಾರ್ದ ಸಹಕಾರಿ ಸಂಘದವರು 2026 ರ ಕ್ಯಾಲೆಂಡರ್ ನ ಬಿಡುಗಡೆ ಮಾಡಿದರು

Leave a Comment