NEWS

ಡಿ.29 ರಂದು ವಿಶ್ವಮಾನವ ದಿನಾಚರಣೆ, ವಿಶೇಷ ಉಪನ್ಯಾಸ

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅರ್ಕೇಶ್ವರನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ವಿಶ್ವಮಾನವ ದಿನಾಚರಣೆಯನ್ನು ಡಿಸೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಅರ್ಕೇಶ್ವರನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಆರ್.ಎ.ಪಿ.ಸಿ.ಎಸ್ ಆವರಣದಲ್ಲಿರುವ ಕುವೆಂಪುರವರ ಪ್ರತಿಮೆಗೆ ಬೆಳಿಗ್ಗೆ 9 ಗಂಟೆಗೆ ಮಾಲಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ರವಿಕುಮಾರ್ ಗೌಡ ಗಣಿಗ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜು, ಕೆ.ಎಂ.ಉದಯ, ರಾಜ್ಯ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್ ಆತ್ಮಾನಂದ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ ಡಾ. ಮೂರ್ತಿ, ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ. ಗಂಗಾಧರ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿ.ಬಸವೇಗೌಡ ಭಾಗವಹಿಸಲಿದ್ದಾರೆ ಹಾಗೂ ಉಪನ್ಯಾಸಕರು ಮತ್ತು ಕವಿಗಳಾದ ಕೆ.ಪಿ ಮೃತ್ಯುಂಜಯ ಅವರು ಉಪನ್ಯಾಸ ನೀಡಲಿದ್ದಾರೆ.

Related posts

ಪಾಂಡವಪುರ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಅನಿರೀಕ್ಷಿತ ಭೇಟಿ

ಸ್ವ ಸಹಾಯ ಸಂಘಗಳ ಉತ್ಪನ್ನಗಳ ಮೌಲ್ಯವರ್ಧನೆ ಮಾಡುವ ಮೂಲಕ ಮಹಿಳೆಯರು ಉದ್ಯೋಗ ಸೃಷ್ಟಿಕರ್ತರಾಗಲಿ

ಸುತ್ತೂರು ಸಂಸ್ಥಾನ ಸಮಾಜದಲ್ಲಿ ಜನಪರ ಮೌಲ್ಯಗಳನ್ನು ಬಿತ್ತುತ ಬಂದಿದೆ: ಎಂ.ಪಿ. ನರೇಂದ್ರ ಸ್ವಾಮಿ

Leave a Comment