NEWS

ಜ.1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಪಾಲನೆ ನ್ಯೂಸ್

ಮಂಡ್ಯ:- ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ 2025-26 ನೇ ಸಾಲಿನ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜನವರಿ 1 ರಂದು ಬೆಳಿಗ್ಗೆ 11 ಗಂಟೆಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಿಂದ ಜಕಣಾಚಾರಿರವರ ಅವರ ಅಲಂಕೃತ ಭಾವಚಿತ್ರ ಮೆರವಣಿಗೆ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಲಾಮಂದಿರ ತಲುಪಲಿದೆ.

ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ .ಕುಮಾರಸ್ವಾಮಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಮಂಡ್ಯ ವಿಧಾನಸಭಾ ಶಾಸಕರಾದ ಪಿ.ರವಿಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ವಿಧಾನ ಸಭಾ ಶಾಸಕರುಗಳಾದ ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜು, ಕೆ.ಎಂ ಉದಯ, ರಾಜ್ಯ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್ ಆತ್ಮಾನಂದ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷರಾದ ಡಾ. ಮೂರ್ತಿ, ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ ಭಾಗವಹಿಸಲಿದ್ದಾರೆ.

Related posts

ಬೇಸಿಗೆ ಕುಡಿವ ನೀರು ವ್ಯತ್ಯಯ ತಡೆಗೆ ನಿರಂತರ ವಿದ್ಯುತ್ ಪೂರೈಕೆ

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಜಿಲ್ಲಾ ಕಸಾಪ ಅಭಿನಂದನೆ ಇಂದು ಸಂಜೆ

ನದಿಯ ಪಾವಿತ್ರ್ಯತೆ, ಪರಿಸರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಿ

Leave a Comment