NEWS

ಅಕ್ಕ ಪಡೆ ಯೋಜನೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು

ಪಾಲನೆ ನ್ಯೂಸ್

‌ಮಂಡ್ಯ: ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡಲು ಅಕ್ಕ ಪಡೆ ಯೋಜನೆಗೆ ಚಾಲನೆಯನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಚಾಲನೆ ನೀಡಿದರು.

ಇಂದು ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಅಕ್ಕ ಪಡೆ ವಾಹನಕ್ಕೆ ಚಾಲನೆಯನ್ನು ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪೋಲೀಸ್‌ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಹಿಳಾ ಗೃಹ ರಕ್ಷಕರನ್ನೊಳಗೊಂಡು ಅಕ್ಕ ಪಡೆಯನ್ನು ರಚಿಸಲಾಗಿದೆ.

ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕಪಡೆಯ ಪ್ರಾಥಮಿಕ ಉದ್ದೇಶವಾಗಿದೆ. ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕಪಡೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಮತ್ತು ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ.

ಅಕ್ಕ ಪಡೆ ಯೋಜನೆಯ ತಂಡದವರು ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವುದು ಮತ್ತು ಮಹಿಳೆಯರು ಮತ್ತು ಮಕ್ಕಳನ್ನು ಒಳಗೊಂಡ ಸಂಕಷ್ಟದಲ್ಲಿರುವವರ ಕರೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತದೆ. ಲಿಂಗ ಸಮಾನತೆ, ಮಕ್ಕಳ ರಕ್ಷಣೆ, ಕಾನೂನು ಹಕ್ಕುಗಳು ಸಹಾಯವಾಣಿಗಳು ಮತ್ತು ವರದಿ ಮಾಡುವ ಕಾರ್ಯವಿಧಾನಗಳಂತಹ ವಿಷಯಗಳ ಕುರಿತು ಶಾಲೆ, ಮಾರುಕಟ್ಟೆ ಮತ್ತು ನೆರೆಹೊರೆಗಳಲ್ಲಿ ಕಾನೂನು ಅರಿವು ಅಭಿಯಾನಗಳನ್ನು ನಡೆಸುವುದು ಮತ್ತು ಸಮುದಾಯದಲ್ಲಿ ಸ್ನೇಹಪರ ಮತ್ತು ವಿಶ್ವಾಸಾರ್ಹ ಸ್ಥಿತಿಯನ್ನು ಸ್ಥಾಪಿಸುವುದು ಸಂತ್ರಸ್ಥೆಯರಿಗೆ ಯಾವುದೇ ಭಯವಿಲ್ಲದೆ ಕಾನೂನು ಸಹಾಯ ಪಡೆಯಲು ಪ್ರೋತ್ಸಾಹಿಸುತ್ತದೆ.

Related posts

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ತಾಲ್ಲೂಕು ಕಚೇರಿ ಭೇಟಿ ಹಾಗೂ ಪರಿಶೀಲನೆ

ಏ.8ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೌಲ್ಯಮಾಪನ ಆರಂಭ

ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ವಿರುದ್ಧದ ವಿಚಾರಣೆ ಮುಂದುವರಿಯಲಿ

Leave a Comment