NEWS

ಇತರೆ ಜಿಲ್ಲೆಗಳಿಗೆ ಮಾದರಿಯಾಗುವಂತೆ ಆಹಾರ ಸುರಕ್ಷತಾ ಹಾಗೂ ರಾಷ್ಟೀಯ ಗ್ರಾಹಕರ ದಿನಾಚರಣೆಯನ್ನು ಆಚರಿಸೋಣ: ಹೆಚ್. ಕೃಷ್ಣ

ಪಾಲನೆ ನ್ಯೂಸ್

‌ಮಂಡ್ಯ: ಜನವರಿ 9ರಂದು ಜಿಲ್ಲೆಯಲ್ಲಿ ನಡೆಯಲಿರುವ ಆಹಾರ ಸುರಕ್ಷತಾ ಹಾಗೂ ರಾಷ್ಟ್ರೀಯ ಗ್ರಾಹಕ ದಿನಾಚರಣೆ ಕಾರ್ಯಕ್ರಮವನ್ನು ಇತರ ಜಿಲ್ಲೆಗಳಿಗೆ ಮಾದರಿಯಾಗುವಂತೆ ಆಚರಿಸೋಣ ಎಂದು ಅಧಿಕಾರಿಗಳಿಗೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಹೆಚ್.ಕೃಷ್ಣ ಅವರು ಸೂಚಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಆಹಾರ ಸುರಕ್ಷತಾ ಹಾಗೂ ರಾಷ್ಟ್ರೀಯ ಗ್ರಾಹಕ ದಿನಾಚರಣೆಯ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸದರಿ ಕಾರ್ಯಕ್ರಮವನ್ನು 14 ಇಲಾಖೆಗಳು ಸೇರಿ ಜನವರಿ 9 ರಂದು ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಅಧಿಕಾರಿಗಳು ಸಮನ್ವಯ ಸಾಧಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಆಹಾರ ಇಲಾಖೆಯ ಸಚಿವರು ಭಾಗಿಯಾಗಲಿದ್ದಾರೆ ಎಂದರು.

ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ ಆಹಾರ ಸುರಕ್ಷತಾ ಹಾಗೂ ರಾಷ್ಟ್ರೀಯ ಗ್ರಾಹಕ ದಿನಾಚರಣೆಯ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಿ. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಸಿದ್ಧಪಡಿಸಿ. ಆಹಾರ ಸುರಕ್ಷತೆ ಮತ್ತು ಗ್ರಾಹಕರ ರಕ್ಷಣೆಗೆ ಸಂಬಂಧಿಸಿದಂತೆ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸವನ್ನು ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದು ತಿಳಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಎಲ್ ಪಿ.ಜಿ ಸೇವಾ ಸಂಸ್ಥೆಗಳು, ಮಹಿಳಾ ಸ್ವಸಹಾಯ ಗುಂಪುಗಳು ಸೇರಿದಂತೆ ಇನ್ನಿತರ ಇಲಾಖೆಗಳ ವತಿಯಿಂದ ಆಹಾರ ಸುರಕ್ಷತೆ ಮತ್ತು ಗ್ರಾಹಕ ಸೇವೆಗಳ ಕುರಿತು ಸಾರ್ವಜನಿಕರಿಗೆ ತಿಳಿಸಲು 25 ಮಳಿಗೆಗಳನ್ನು ಸ್ಥಾಪಿಸಲಾಗುವುದು. ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಪ್ರತೀಕ್ ಹೆಗ್ಡೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾಧಿಕಾರಿ ಮಂಜುಳಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related posts

An architect isn’t someone; he is visionary

ಗಗನಯಾತ್ರಿ ಸುನಿತಾ ವಿಲಿಯಮ್ಸ್ ನಿವೃತ್ತಿ ಘೋಷಣೆ

ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಸಂಬಂಧ “ಮಿಷನ್ 40 ಫಾರ್ 90 ಡೇಸ್” ಅಭಿಯಾನದ ಪರಿಶೀಲನಾ ಸಭೆ ನಡೆಸಿದ ಜಿ ಪಂ ಸಿಇಒ

Leave a Comment