NEWS

ಜ.26 ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿ:

ಗಣರಾಜ್ಯೋತ್ಸವದ ಆಚರಣೆ ಪ್ರತಿಯೊಬ್ಬರ ಜವಾಬ್ದಾರಿ, ಸಡಗರ ಮತ್ತು ಸಂಭ್ರಮದಿಂದ ಆಚರಿಸಿ: ಡಾ ಕುಮಾರ

ಪಾಲನೆ ನ್ಯೂಸ್

ಮಂಡ್ಯ: ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಜನವರಿ 26 ರ ಗಣರಾಜ್ಯೋತ್ಸವ ಆಚರಣೆ ಕುರಿತು ಆಯೋಜಿಸಲಾಗಿದ್ದ  ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಸಂಬಂಧಪಟ್ಟ ಎಲ್ಲರಿಗೂ ಆಹ್ವಾನ ಪತ್ರಿಕೆಯನ್ನು ತಲುಪಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿಗೆ ಸರ್ಕಾರಿ ಕಚೇರಿಗಳು ಶಾಲಾ-ಕಾಲೇಜುಗಳು ಹಾಗೂ ಕೋ ಆಪರೇಟಿವ್ ಸೊಸೈಟಿಗಳಲ್ಲಿ ಕಡ್ಡಾಯವಾಗಿ ಗಣರಾಜ್ಯೋತ್ಸವವನ್ನು ಆಯೋಜನೆ ಮಾಡಬೇಕು. ಸರ್ಕಾರಿ ಇಲಾಖೆಯ ಕಚೇರಿಗಳನ್ನು ದೀಪಾಲಂಕಾರ ಹಾಗೂ ತೋರಣಗಳಿಂದ ಶೃಂಗರಗೊಳಿಸಬೇಕು ಎಂದು ಹೇಳಿದರು.

30 ತಂಡಗಳಿಂದ ಪಥ ಸಂಚಲನ

ಗಣರಾಜ್ಯೋತ್ಸವದ ಅಂಗವಾಗಿ 30 ತಂಡಗಳಿಂದ ಪಥ ಸಂಚಲನವನ್ನು ನಡೆಸಲಾಗುವುದು. ಸಂಬಂಧಪಟ್ಟ ಅಧಿಕಾರಿಗಳು ಪಥ ಸಂಚಲನವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಿ. ಕಾರ್ಯಕ್ರಮಕ್ಕೂ ಮುಂದೆ ಮೂರು ದಿನಗಳ ಕಾಲ ಪ್ರಾಯೋಗಿಕ ಪಥ ಸಂಚಲನ ಮಾಡಿ. ಪ್ರಾಯೋಗಿಕ ಪಥ ಸಂಚಲನ ಮಾಡುವ ಸಂದರ್ಭದಲ್ಲಿ ಪಥ ಸಂಚಲನಗಾರರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಎಂದು ಹೇಳಿದರು.

ವೇದಿಕೆಯನ್ನು ಶಿಷ್ಟಾಚಾರ ದಂತೆ ನಿರ್ಮಿಸಿ ಹಾಗೂ ವೇದಿಕೆಗೆ ಸಂಬಂಧಪಟ್ಟಂತೆ ಸೌಂಡ್ ಸಿಸ್ಟಮ್, ಆಸನಗಳ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಗಣರಾಜ್ಯೋತ್ಸವ ನಡೆಯುವ ದಿನದಂದು  ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವುದರಿಂದ ಮೈದಾನದಲ್ಲಿ ಧೂಳು ಹೇಳದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.

ಗಣರಾಜ್ಯೋತ್ಸವದ ದಿನದಂದು ಕಾರ್ಯಕ್ರಮಕ್ಕೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಅಧಿಕಾರಿಗಳಿಗೆ ನೀಡಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ ಅವರು ಮಾತನಾಡಿ ಸದರಿ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲೆಗಳಿಂದ ಮೂರು ಹಾಗೂ ಕಾಲೇಜುಗಳಿಂದ ಒಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಂದ ನಾಡಗೀತೆ ಮತ್ತು ರಾಷ್ಟ್ರಗೀತೆ ಗಾಯನವನ್ನು ಪ್ರಸ್ತುತ ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದಂತೆ ಸೂಕ್ತ ಕ್ರಮವಹಿಸಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ಹೇಳಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಪಶುಪಾಲನ ಇಲಾಖೆ ಉಪ ನಿರ್ದೇಶಕ ಶಿವಲಿಂಗಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ ಚೆಲುವಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ರಷ್ಯಾದಿಂದ ಕಚ್ಚಾ ತೈಲ ಖರೀದಿಗೆ ಭಾರತಕ್ಕೆ 30 ದಿನಗಳವರೆಗೆ ವಿನಾಯಿತಿ: ಅಮೆರಿಕ

24ಕ್ಕೆ ಮಂಡ್ಯ ನಗರದಲ್ಲಿ ಹಿಂದೂ ಸಮಾಜೋತ್ಸವ

ಪ್ರೊ ಲೀಗ್ ಹಾಕಿ ಕೊನೆಗೂ ಗೆದ್ದ ಭಾರತ ಗೆಲುವಿನ ಖಾತೆ ತೆರೆದಿದೆ

Leave a Comment