NEWS

ಜ.9 ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025 ಆಹಾರ ಸುರಕ್ಷತೆ ಮತ್ತು ಕಾನೂನು ಅರಿವು ಕಾರ್ಯಕ್ರಮ:

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಕರ್ನಾಟಕ ರಾಜ್ಯ ಆಹಾರ ಆಯೋಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ (ರಿ) ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜನವರಿ 9 ರಂದು ಬೆಳಿಗ್ಗೆ 9:45 ಗಂಟೆಗೆ ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025 ಆಹಾರ ಸುರಕ್ಷತೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು “ಡಿಜಿಟಲ್ ನ್ಯಾಯದ ಮೂಲಕ ಪರಿಣಾಮಕಾರಿ ಹಾಗೂ ತ್ವರಿತ ವಿಲೇವಾರಿ” ಎಂಬ ಘೋಷವಾಕ್ಯದಡಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಆಯೋಗದ ಅಧ್ಯಕ್ಷರಾದ ಡಾ. ಹೆಚ್.ಕೃಷ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕರ್ನಾಟಕ ರಾಜ್ಯ ಗ್ರಾಹಕರ ಆಯೋಗ ಅಧ್ಯಕ್ಷರು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಟಿ.ಜಿ ಶಿವಶಂಕರೇಗೌಡರು ಘನ ಉಪಸ್ಥಿತಿ ವಹಿಸಲಿದ್ದಾರೆ.

ನ್ಯಾಷನಲ್ ಲಾ ಕಾಲೇಜಿನ ತರಬೇತಿ ಸಂಯೋಜಕರಾದ ಕುಮಾರಸ್ವಾಮಿರವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗೌರವಾನ್ವಿತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರಾದ ಸುಬ್ರಹ್ಮಣ್ಯ ಜೆ.ಎನ್, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ .ರವಿಕುಮಾರ್( ಗಣಿಗ ),  ಜಿಲ್ಲಾಧಿಕಾರಿಗಳಾದ ಡಾ ಕುಮಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಆನಂದ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶೋಭಾರಾಣಿ ವಿ ಜೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷರಾದ ಎಸ್.ವಸಂತಕುಮಾರ್, ಜಿಲ್ಲಾ ವಕೀಲರ ಸಂಘ ಅಧ್ಯಕ್ಷರಾದ ಟಿ.ಎಸ್.ಸತ್ಯಾನಂದ, ಕಾರ್ಯದರ್ಶಿಯಾದ ಸತೀಶ್, ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಉಪ ನಿರ್ದೇಶಕರಾದ ಪ್ರತೀಕ್ ಜಿ ಹೆಗ್ಡೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಜಿಲ್ಲಾ ಅಂಕಿತ ಅಧಿಕಾರಿಯಾದ ಡಾ. ಶಶಿಧರ್, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಲಿಂಗರಾಜು ರವರು ಭಾಗವಹಿದಲಿದ್ದಾರೆ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಸಮುದಾಯದವರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು: ಡಾ. ಕುಮಾರ

ಫಲಪುಷ್ಪ ಪ್ರದರ್ಶನ: ವಾಹನ ನಿಲುಗಡೆ ಸೂಚನೆ

ಚಿರತೆ ದಾಳಿಯಿಂದ ಮೃತಪಟ್ಟ ಯುವಕನ ನಿವಾಸಕ್ಕೆ ಮಾಜಿ ಶಾಸಕ: ರವೀಂದ್ರ ಶ್ರೀಕಂಠಯ್ಯ ಭೇಟಿ

Leave a Comment