NEWS

ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025

ಆಹಾರ ಸುರಕ್ಷತೆ ಮತ್ತು ಕಾನೂನು ಅರಿವು ಕಾರ್ಯಕ್ರಮದಮಳಿಗೆಗಳ ಉದ್ಘಾಟನೆ

ಪಾಲನೆ ನ್ಯೂಸ್

‌ಮಂಡ್ಯ: ರಾಷ್ಟ್ರೀಯ ಗ್ರಾಹಕ ದಿನಾಚರಣೆ 2025 ಆಹಾರ ಸುರಕ್ಷತೆ ಮತ್ತು ಕಾನೂನು ಅರಿವು ಕಾರ್ಯಕ್ರಮದ ಪ್ರಯುಕ್ತ ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದ ಆವರಣದಲ್ಲಿ  ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಮಾಜ ಕಲ್ಯಾಣ ಇಲಾಖೆ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಲಾಗಿದ್ದ ಮಳಿಗೆಗಳನ್ನು ಜಿಲ್ಲಾಧಿಕಾರಿ ಡಾ ಕುಮಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗೌರವಾನ್ವಿತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರಾದ ಸುಬ್ರಹ್ಮಣ್ಯ ಜೆ.ಎನ್ ಅವರು ಉದ್ಘಾಟಿಸಿದರು.

ಇದೆ ಸಂದರ್ಭದಲ್ಲಿ  ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ ಹೆಚ್.ಕೃಷ್ಣ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆನಂದ್ ಎಂ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ  ಟಿ.ಎಸ್ ಸತ್ಯಾನಂದ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಪ್ರತೀಕ್ ಹೆಗ್ಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಮಂಡ್ಯ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ, ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಕೊರೋನಾ ರೀತಿ ಹಂಟು ವೈರಸ್ ಪತ್ತೆ: 8 ಜನರಲ್ಲಿ ದೃಢ 3 ಸಾವು

ಟ್ರಂಪ್ ಕ್ಷಮೆಯಾಚನೆ ಬಯಸಿದ ಬ್ರಿಟನ್ ಪ್ರಧಾನಿ: ನ್ಯಾಟೊ ಪಡೆಗೆ ಅವಮಾನ

Leave a Comment