NEWS

ಜಿಲ್ಲೆಯ ಹುತಾತ್ಮ ವೀರಯೋಧನಿಗೆ  ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಕೆ

ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ

ಪಾಲನೆ ನ್ಯೂಸ್

ಮಂಡ್ಯ: ನಗರದ ತಾವರೆಗೆರೆ ಗ್ರಾಮ ನಿವಾಸಿ ಎಂ.ಬಿ.ಮಾದೇಗೌಡ (44) ಮೃತ ಯೋಧ ಗಡಿ ಭದ್ರತಾ ಪಡೆ (ಬಿ.ಎಸ್.ಎಫ್.) ಯೋಧನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯದ ಸಮಯದಲ್ಲಿ ಹೃದಯಾಘಾತದಿಂದ ಮೃತಪಟ್ಟಿ ಯೋಧನಿಗೆ  ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಹುತಾತ್ಮ ಯೋಧನಿಗೆ ಗೌರವ ಸಲ್ಲಿಸಲಾಯಿತು.

ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್ ನ ಬಿ.ಎಸ್.ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು 2000 ರಲ್ಲಿ ಮೈಸೂರಿನಲ್ಲಿ ನಡೆದ BSF ಸೇನಾ ನೇಮಕಾತಿ ರ‌್ಯಾಲಿಯಲ್ಲಿ ಆಯ್ಕೆಯಾಗಿ BSF ಸೇನೆಗೆ ಸೇರಿದ್ದರು. ಕಳೆದ 25 ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು.

ಮಂಡ್ಯಕ್ಕೆ ಆಗಮಿಸಿದ್ದ ಮೃತ ಯೋಧ ಪಾರ್ಥಿವ ಶರೀರವನ್ನ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಲಾಗಿದೆ.

ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಪೊಲೀಸರು ಗೌರವ ಸಮರ್ಪಣೆ.

ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಯೋಧನ ಮೃತ ದೇಹಕ್ಕೆ ಪುಷ್ಪಗುಚ್ಛ ಇರಿಸಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ  ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕಿ ಶೋಭಾರಾಣಿ ಅವರು ಗೌರವ ನಮನವನ್ನು ಸಲ್ಲಿಸಲಾಯಿತು.

ನಂತರ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಜಿಲ್ಲಾಡಳಿತದ ವತಿಯಿಂದ ಗೌರವ ಸಲ್ಲಿಸಿದ ನಂತರ  ಮೃತ ಕುಟುಂಬಕ್ಕೆ  ಶಾಸಕ ಗಣಿಗ ರವಿಕುಮಾರ್, ಡಿಸಿ ಡಾ.ಕುಮಾರ, ಎಸ್ಪಿ ಶೋಭಾರಾಣಿ ಅವರು ಸಾಂತ್ವನ ಹೇಳಿದರು. ಮಧ್ಯಾಹ್ನದ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

18 ವರ್ಷದೊಳಗಿನವರಿಗೆ ಬಾಲಾಪರಾಧಿಯಡಿ ಸಮಾನ ಶಿಕ್ಷೆ

ಹೊಸ ವರ್ಷ ಆಚರಣೆ ವೇಳೆ ಭೀಕರ ಅಗ್ನಿ ಅವಘಡ: 40 ಜನರು ಸಜೀವ ದಹನ..!

ವಿಜ್ಞಾನಕ್ಕೆ ಕಲೆ, ಸಂಸ್ಕೃತಿ ಸಮ್ಮಿಳಿತವಾಗಬೇಕು

Leave a Comment