NEWS

ಸರ್ಕಾರಿ ನೌಕರರು ದೈಹಿಕವಾಗಿ ಸಧೃಡವಾಗಿ ಇರಬೇಕು: ಎನ್ ಚಲುವರಾಯಸ್ವಾಮಿ

ದೈಹಿಕ ದೃಢತೆಯಿಂದ ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ

ಪಾಲನೆ ನ್ಯೂಸ್

ಮಂಡ್ಯ: ಸರ್ಕಾರಿ ನೌಕರರು ದೈಹಿಕವಾಗಿ ಸದೃಢರಾಗಬೇಕು ಇದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ರಿ) ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮಂಡ್ಯ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2025-26 ರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಕ್ರೀಡಾ ಧ್ವಜವನ್ನು ಹಾರಿ‌ಸಿ ನಂತರ ದೀಪ ಬೆಳಗಿಸಿ ಉದ್ಘಾಟಿಸಿದರು.

ದೈಹಿಕವಾಗಿ ದೃಢತೆಯನ್ನು ಕಾಪಾಡಿಕೊಳ್ಳುವುದರಿಂದ ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ. ಸರ್ಕಾರಿ ನೌಕರರು ಇಂತಹ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಬೇಕು. ಕೇವಲ ಜಿಲ್ಲಾ ಮಟ್ಟಕ್ಕೆ ಸೀಮಿತವಾಗದೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಮಾದರಿಯಾಗಬೇಕು ಎಂದರು.

ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿಕುಮಾರ್ ಅವರು ಮಾತನಾಡಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಮುಖ್ಯ. ಸರ್ಕಾರಿ ನೌಕರರು ಸದರಿ ಕ್ರೀಡಾ ಕೂಟ ಮತ್ತು ಸಂಸ್ಕೃತಿ ಸ್ಪರ್ಧೆಗಳಲ್ಲಿ ಭಾಗಿಯಾಗಿ, ಬಹುಮಾನ ಸಿಗದಿದ್ದರೂ ಪರವಾಗಿಲ್ಲ ಆದರೆ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ ಎಂದು ಹೇಳಿದರು.

ನಂತರದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ನಾಗೇಶ್ ಕೆ ಅವರು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರಿಗೆ ಜಿಲ್ಲೆಯ ಏಳು ತಾಲ್ಲೂಕಿನಿಂದ ಕ್ರೀಡಾ ಕೂಟಕ್ಕೆ ಆಗಮಿಸಿದ್ದ ಸ್ಪರ್ಧಿಗಳ ಪರಿಚಯ ಮಾಡಿ ಕೊಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಶೋಭಾರಾಣಿ ವಿ ಜೆ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಹಿರಿಯ ಉಪಾಧ್ಯಕ್ಷ ಶಂಭುಗೌಡ ಎಸ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ನಾಗೇಶ್ ಕೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಡಾ. ಮೀರಾ ಶಿವಲಿಂಗಯ್ಯ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಾಲ್ಕನೇ ತ್ರೈಮಾಸಿಕದಲ್ಲಿ ₹16,971 ಕೋಟಿ ನಿವ್ವಳ ಲಾಭ ಗಳಿಸಿದೆ

ಏ.1ರಂದು ನಂಜನಗೂಡು ತಾಲ್ಲೂಕಿನ ತಾಂಡವಪುರದಲ್ಲಿ ಉದ್ಯೋಗ ಮೇಳ

ಮಾರ್ಚ್ 05 ರಂದು ವಿಕಸಿತ ಭಾರತ ಯುವ ಸಂಪರ್ಕ -2026 ಕಾರ್ಯಕ್ರಮ

Leave a Comment