NEWS

ಬಳ್ಳಾರಿ ಘರ್ಷಣೆ: ಸಿಬಿಐ ತನಿಖೆಗೆ ಆಗ್ರಹಿಸಿ ಇಂದು ಬಿಜೆಪಿ ಸಮಾವೇಶ

ಪಾಲನೆ ನ್ಯೂಸ್

ಬಳ್ಳಾರಿ: ಬಳ್ಳಾರಿ ಘರ್ಷಣೆ ಪ್ರಕರಣದ ಸಂಬಂಧ ಶಾಸಕ ನಾರಾ ಭರತ್‌ ರೆಡ್ಡಿ, ಅವರ ಬೆಂಬಲಿಗರನ್ನು ಬಂಧಿಸಬೇಕು ಮತ್ತು ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಗರದಲ್ಲಿ ಬಹಿರಂಗ ಸಮಾವೇಶ ಹಮ್ಮಿಕೊಂಡಿದೆ.

‘ಎಪಿಎಂಸಿ ಪ್ರಾಂಗಣದಲ್ಲಿ ಸಮಾವೇಶ ನಡೆಯಲಿದ್ದು, 30 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ’ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ಅಹಿತಕರ ಘಟನೆಗೆ ಆಸ್ಪದವಾಗದಂತೆ ನಿಗಾ ವಹಿಸಲು 2,500 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಮುಖಂಡರಾದ ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಸಂಸದರಾದ ಗೋವಿಂದ ಕಾರಜೋಳ, ಜಗದೀಶ ಶೆಟ್ಟ‌ರ್ ಮತ್ತಿತರರು ಭಾಗವಹಿಸುವರು’ ಎಂದು ಶಾಸಕ ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

ಇಬ್ಬರು ಅಂಗರಕ್ಷಕರ ಬಂಧನ:

ಘರ್ಷಣೆ ಮತ್ತು ಹತ್ಯೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಶುಕ್ರವಾರ ಶಾಸಕ ಭರತ್ ರೆಡ್ಡಿ ಕಡೆಯವರ ಬಲ್ಮೀತ್ ಸಿಂಗ್ ಮತ್ತು ಮಹೇಂದ್ರ ಸಿಂಗ್ ಎಂಬ ಅಂಗರಕ್ಷಕರನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನೂ ಬ್ರೂಸ್‌ಪೇಟೆಯ ಪೊಲೀಸ್‌ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿ, ನಂತರ ಬೆಂಗಳೂರಿಗೆ ಕರೆದೊಯ್ಯಲಾಯಿತು ಎಂದು ಮೂಲಗಳು ಹೇಳಿವೆ.

ಪ್ರಕರಣ ಸಂಬಂಧ ಗುರುಚರಣ್ ಸಿಂಗ್ ಎಂಬ ಖಾಸಗಿ ಅಂಗರಕ್ಷಕನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಭರತ್ ರೆಡ್ಡಿ ಕಡೆಯ ಅಂಗರಕ್ಷಕರು ಆತ್ಮರಕ್ಷಣೆಗಾಗಿ ಜಮ್ಮು ಕಾಶ್ಮೀರದಿಂದ ಬಂದೂಕು ಪರವಾನಗಿ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಸಿಎಂ ಸ್ಟಾಲಿನ್ ಸ್ಟಾಂಡ್ ಅಪ್ ಕಾಮೆಡಿಯನ್ ಎಂದು ನಟ ವಿಜಯ್ ವ್ಯಂಗ್ಯ

ಷೇರುಪೇಟೆ ತೀವ್ರ ವಹಿವಾಟು

ಫೆ.16ರಂದೂ ಬಂದ ಇ-ಮೇಲ್ ಸಂದೇಶದಲ್ಲಿ ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ

Leave a Comment