NEWS

ಜಿಲ್ಲೆಯಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಿ: ಡಾ. ಕುಮಾರ

2025-26 ನಲ್ಲಿ ಜಿಲ್ಲೆಯಲ್ಲಿ 17.58 ಟನ್ ಮೀನು ಉತ್ಪಾದನೆ

ಪಾಲನೆ ನ್ಯೂಸ್

ಮಂಡ್ಯ: ರೈತರ ಆದಾಯ ಹೆಚ್ಚಿಸುವಲ್ಲಿ ಕೃಷಿಯಷ್ಟೆ ಮಹತ್ವದ ಪಾತ್ರವನ್ನು ಮೀನುಗಾರಿಕೆಯು ವಹಿಸುತ್ತದೆ. ಮೀನು ಸಾಕಣೆ ಕುರಿತು ರೈತರಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ಮೀನುಗಾರಿಕೆಯನ್ನು ಉತ್ತೇಜಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26ನೇ ಸಾಲಿನ ಕೇಂದ್ರ ಪುರಸ್ಕೃತ “ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ” (P.M.M.S.Y)ಯನ್ನು ಅನುಷ್ಠಾನ ಮತ್ತು ಮೇಲುಸ್ತುವಾರಿ ನಡೆಸಲು ಸಂಬಂಧ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೀನುಗಾರಿಕೆ ಇಲಾಖೆಯ ವ್ಯಾಪ್ತಿಯಲ್ಲಿ 177 ಕೆರೆಗಳು ಇದೆ ಎಂದು ಹೇಳಿದರು.

ಈಗಾಗಲೇ ಮೀನುಗಾರಿಕೆ ಇಲಾಖೆಯ ವ್ಯಾಪ್ತಿಯ ಹಲವು ಕೆರೆಗಳಿಗೆ ಟೆಂಡರ್ ಕರೆಯಲಾಗಿದೆ. ಜಿಲ್ಲೆಯಲ್ಲಿ 2021 ನೇ ಸಾಲಿನಿಂದ 25 ನೇ ಸಾಲಿನ ವರೆಗೂ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 742 ಫಲಾನುಭವಿಗಳಿದ್ದಾರೆ. ಇಲ್ಲಿಯವರೆಗೂ 124 ಫಲಾನುಭವಿಗಳಿಗೆ 513.38 ಲಕ್ಷ ಸಹಾಯಧನ ನೀಡಲಾಗಿದೆ ಎಂದರು.

ಮೀನುಗಾರಿಕೆ ಇಲಾಖೆಯಿಂದ 1 ಹೆಕ್ಟೇರ್ ಪ್ರದೇಶದಲ್ಲಿ ಮೀನು ಸಾಕಣೆ ಮಾಡಲು 7 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಶೇ. 60 ರಷ್ಟು ಸಬ್ಸಿಡಿ ಹಾಗೂ ಸಾಮಾನ್ಯ ವರ್ಗಗಳಿಗೆ ಶೇ. 40 ರಷ್ಟು ಸಬ್ಸಿಡಿ ನೀಡಲಾಗುತ್ತದೆ ಎಂದು ತಿಳಿಸಿದರು.

ಮೀನುಗಾರಿಕೆ ಇಲಾಖೆಯಿಂದ ಸೌಲಭ್ಯ ಪಡೆದು ಮೀನುಗಾರಿಕೆಯಲ್ಲಿ ಯಶಸ್ಸು ಗಳಿಸಿದವರ ಯಶೋಗಾಥೆಯನ್ನು ಸಿದ್ಧಪಡಿಸಿ. ಹಿಂದೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸೌಲಭ್ಯ ಪಡೆದ ಅರ್ಹ ಫಲಾನುಭವಿಗಳು ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದಾರ ಎಂಬುದನ್ನು ಪರಿಶೀಲಿಸಿ ಎಂದು ಹೇಳಿದರು.

ಮೀನುಗಾರಿಕೆ ಮಾಡಲು ಫಲಾನುಭವಿಗಳಿಗೆ ಸಾಲ ಸೌಲಭ್ಯ ಒದಗಿಸುವುದರ ಜೊತೆಗೆ ಮೀನುಗಾರಿಕೆ ಕುರಿತು ಸೂಕ್ತ ತರಬೇತಿ ನೀಡಿ. ಮೀನುಗಾರರು ಹಾಗೂ ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಬದುಕಬೇಕು. ಜಿಲ್ಲೆಯಲ್ಲಿ ಪ್ರತಿ ವರ್ಷ ಸರಾಸರಿ 30 ಸಾವಿರಕ್ಕೂ ಹೆಚ್ಚು ಟನ್ ಮೀನು ಉತ್ಪಾದನೆ ಆಗುತ್ತಿದೆ. ಕರಾವಳಿ ಹೊರತುಪಡಿಸಿ ಮೀನುಗಾರಿಕೆಯಲ್ಲಿ ರಾಜ್ಯದಲ್ಲಿ ಜಿಲ್ಲೆ ಹತ್ತನೇ ಸ್ಥಾನದೊಳಗಿದೆ ಎಂದು ಹೇಳಿದರು.

ಮೀನುಗಾರಿಕೆ ಮಾಡಲು ವರ್ಷ ಪೂರ್ತಿ ನೀರು ಅಗತ್ಯ. ಹಾಗಾಗಿ ಜಿಲ್ಲೆಯ ವರ್ಷ ಪೂರ್ತಿ ನೀರಿನ ಲಭ್ಯತೆ ಇರುವ ಪ್ರದೇಶಗಳಿಗೆ ಆದ್ಯತೆ ಮೇರೆಗೆ ಮೀನುಗಾರಿಕೆ ಪ್ರೋತ್ಸಾಹ ನೀಡಿ. ಜಿಲ್ಲೆಯಲ್ಲಿ ಬೇಡಿಕೆ ಇರುವ ಮೀನಿನ ತಳಿಯನ್ನು ಅಭಿವೃದ್ಧಿಪಡಿಸಿ, ಸದರಿ ವರ್ಷ ಅರ್ಹ ಮೀನುಗಾರರಿಗೆ ಉತ್ತೇಜನ ನೀಡಲು ನೀಡಿದ ಮತ್ಸ್ಯ ವಾಹನಗಳು ಉತ್ತಮ ಲಾಭ ಗಳಿಸುತ್ತಿವೆ ಎಂದು ಹೇಳಿದರು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಬಾಬಾ ಸಾಬ್, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ಲೋಕೇಶ್, ಪೂಜಾಶ್ರೀ, ಪುಷ್ಪಲತಾ, ಜಗದೀಶ್ ಟಿ.ಡಿ., ಮಹದೇವಸ್ವಾಮಿ, ವಿ.ಸಿ ಫಾರಂನ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಕಮಲಾಬಾಯಿ ಕೂಡಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ರಣವೀ‌ರ್ ಪರ ವಕೀಲರಿಂದ ಹೈಕೋರ್ಟ್‌ಗೆ ಮಾಹಿತಿ

ಮಹಿಳಾ ದಿನದಂದು ಜವಾಬ್ದಾರಿಯನ್ನೂ ನೆನಪಿಸಿಕೊಳ್ಳಬೇಕು : ಪ್ರೊ. ಎಂ. ಶ್ರೀಲತಾ

ಗೌಡ ಸಮಾಜದ ಏಳಿಗಿಗೆ ಶಕ್ತಿ ಮೀರಿ ಪ್ರಯತ್ನ ಮಾಡಿದೆ: ಪೊನ್ನಣ್ಣ

Leave a Comment