NEWS

ಜ. 20ರಂದು ಮಂಡ್ಯ ಜಿಲ್ಲಾ ಯುವ ಸಮಾವೇಶ

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ವಿಶ್ವ ಯುವ ದಿನದ ಅಂಗವಾಗಿ ಮಂಡ್ಯ ಜಿಲ್ಲಾ ಯುವ ಸಮಾ ವೇಶವನ್ನು ನಗರದ ಸಿಲ್ವ‌ರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಜ.20ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಶೈಲೇಂದ್ರ ಕುಮಾ‌ರ್ ತಿಳಿಸಿದರು.

ಸಮಾವೇಶಕ್ಕೂ ಮುನ್ನ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಜಾರಿಗೆ ತಂದಿದ್ದ ಮನರೇಗಾ ಯೋಜನೆಯ ಮೂಲ ಸ್ವರೂಪ ಬದಲಿಸುವುದನ್ನು ಖಂಡಿಸಿ ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಯಚಾಮರಾಜೇಂದ್ರ ಒಡೆಯ‌ರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಮಾವೇಶವನ್ನು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯ ಸ್ವಾಮಿ ಉದ್ಘಾಟಿಸುವರು. ಶಾಸಕ ಪಿ.ರವಿ ಕುಮಾರ್‌ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರ ಶೇಖರ್, ಯುವ ಸಮಿತಿಯ ರಾಜ್ಯಾಧ್ಯಕ್ಷ ಮಂಜುನಾಥ್, ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ, ಸೆಸ್ಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ, ಗ್ಯಾರಂಟಿ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಶಾಸಕರಾದ ಕೆ.ಎಂ. ಉದಯ್, ದರ್ಶನ್ ಪುಟ್ಟಣ್ಣಯ್ಯ, ಮಧು , ಜಿ.ಮಾದೇಗೌಡ ಭಾಗವಹಿಸುವರು ಎಂದು ಹೇಳಿದರು.

ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವ ರಾಯಸ್ವಾಮಿ, ಮನ್‌ಮುಲ್ ಅಧ್ಯಕ್ಷ ಯು.ಸಿ. ಶಿವಕುಮಾರ್ (ಶಿವಪ್ಪ), ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ವಿಜಯಲಕ್ಷ್ಮಿ ರಘುನಂದನ್ ಉಪಸ್ಥಿತರಿರುವರು. ಕಾಂಗ್ರೆಸ್‌ನ ಎಲ್ಲ ಘಟಕಗಳ ಪದಾಧಿಕಾರಿಗಳು ಯುವ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಚಿದಂಬರ್, ಯುವ ಸಮಿತಿ ಉಪಾಧ್ಯಕ್ಷ ಇಂದು ಕುಮಾರ್, ಪ್ರಧಾನ ಕಾರ್ಯದರ್ಶಿ ಗಿರೀಶ್, ತಾಲ್ಲೂಕು ಅಧ್ಯಕ್ಷ ಸುನಿಲ್‌ಕುಮಾ‌ರ್, ಅವಿನಾಶ್ ಹಾಜರಿದ್ದರು.‌

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ರಾಷ್ಟ್ರೀಯ ಈಜು ಚಾಂಪಿಯನ್‌ಷಿಪ್: ಮಂಡ್ಯದ ಕುಶಾಲ್ ಬಿ. ಗೌಡ ದ್ವಿತೀಯ

ಸಾರ್ವಜನಿಕ ಅಭಿಪ್ರಾಯ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೂದನೂರು ಉತ್ಸವ ಅಂಗವಾಗಿ ಹೆಲಿಟೂರಿಸಂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸುರಕ್ಷತಾ ಕ್ರಮಗಳನ್ನು ವಹಿಸಿ – ಡಾ.ಕುಮಾರ

Leave a Comment