NEWS

ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಕ್ಕೆ ಇಂಗ್ಲಿಷ್ ಅನಿವಾರ್ಯ: ಜಿ.ಡಿ.ಹರೀಶ್‌ ಗೌಡ

ಪಾಲನೆ ನ್ಯೂಸ್

ಹುಣಸೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಾತೃಭಾಷೆಯೊಂದಿಗೆ ಇಂಗ್ಲಿಷ್ ಭಾಷೆಗೂ ಪ್ರಾಮುಖ್ಯತೆ ನೀಡಿ ದಲ್ಲಿ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದು ಶಾಸಕ ಜಿ.ಡಿ.ಹರೀಶ್‌ ಗೌಡ ಅಭಿಪ್ರಾಯಪಟ್ಟರು.

ನಗರದ ಮುನೇಶ್ವರಕಾವಲ್ ಮೈದಾನ ದಲ್ಲಿ ನಡೆದ ನ್ಯೂ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್‌ನ 16ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಸ್ಪರ್ಧಾತ್ಮಕ ಯುಗವಾಗಿದ್ದು, ವಿದ್ಯಾರ್ಥಿ ಗಳಲ್ಲಿ ಓದಿನೊಂದಿಗೆ ಕೌಶಲ ಹಾಗೂ ಭಾಷೆಯ ಮೇಲೆ ಹಿಡಿತವಿದ್ದಲ್ಲಿ ಸಾಧನೆಗೆ ಪ್ರೇರಣೆಯಾಗಲಿದೆ. ನಗರ ಪ್ರದೇಶದ ಮಕ್ಕಳಿಗೆ ಸ್ಪರ್ಧೆಯೊಡ್ಡಲು ಗ್ರಾಮೀಣ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷೆ ಅನಿವಾರ್ಯವಾಗಿದ್ದು ಆಸಕ್ತಿಯಿಂದ ಕಲಿಯಬೇಕೆಂದು ಸಲಹೆ ನೀಡಿದರು.

ಆದ್ಯತೆ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್ ಮಾತನಾಡಿ, ಪ್ರತಿಯೊಬ್ಬರಿಗೂ ಶಿಕ್ಷಣ ಮತ್ತು ಆರೋಗ್ಯ ಅತೀ ಮುಖ್ಯ. ಶಿಕ್ಷಣದಿಂದಲೇ ಎಲ್ಲವೂ ಎಂಬುದನ್ನರಿತು ಪ್ರತಿಯೊಬ್ಬರೂ ಶಿಕ್ಷಣಕ್ಕೆ ನೀಡಬೇಕು. ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನಕ್ಕಾಗಿ ಕ್ರೀಡೆ, ಎನ್‌ಎಸ್‌ಎಸ್ ನಂತಹ ಚಟುವಟಿಕೆಗಳಲ್ಲಿ ಭಾಗವಹಿಸ ಬೇಕು. ಪಠ್ಯದೊಂದಿಗೆ ಪತ್ಯೇತರ ಚಟುವ ಟಿಕೆಗಳಿಗೆ ಆದ್ಯತೆ ನೀಡಬೇಕು. ಗುಣಾತ್ಮಕ ಶಿಕ್ಷಣದ ಜೊತೆಗೆ ಇಂಗ್ಲಿಷ್‌ಗೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಸಂಸ್ಥೆಯ ಸಂಸ್ಥಾಪಕ ಸಿದ್ದರಾಮಯ್ಯ ಮಾತನಾಡಿ, ಪೋಷಕರು ಮಕ್ಕಳಿಗೆ ಚೆನ್ನಾಗಿ ವಿದ್ಯಾಭ್ಯಾಸಕೊಡಿಸಿ ಪ್ರಬುದ್ಧರಾಗಿಸಿ ದೇಶದ ಆಸ್ತಿಯಾಗಿಸಬೇಕು ಎಂದರು.

ಮಕ್ಕಳ ಪೋಷಕರಿಗೆ ನಡೆದ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಂಶಿಪ್ರಸನ್ನಕುಮಾರ್, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಧರ್ಮಾಪುರ ನಾರಾಯಣ್ ಅವರನ್ನು ಸನ್ಮಾನಿಸಲಾಯಿತು. ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ವೈದ್ಯ ವಿದ್ಯಾ ರ್ಥಿನಿ ಮಜನಿ, ವಿಜ್ಞಾನಿ ಸ್ವಾತಿಯವರನ್ನು ಗೌರವಿಸಲಾಯಿತು.

ಸಂಸ್ಥೆಯ ಅಧ್ಯಕ್ಷೆ ಪ್ರಿಯಾಂಕ ಎಸ್. ರಾಮ್, ಆಡಳಿತಾಧಿಕಾರಿ ಭರತ್, ನಿವೃತ್ತ ಪೊಲೀಸ್ ಅಧಿಕಾರಿ ನಾರಾಯಣ್, ಮಹಾರಾಣಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಭಾಸ್ಕರ್, ಪ್ರಾಂಶುಪಾಲ ರಾದ ರಾಣಿ, ಶಿಕ್ಷಕರು ಹಾಜರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಪರಿಶೀಲಿಸಲು ಸಮಿತಿ ರಚನೆ

ಕೆರೆ ಜಾಗ ನುಂಗಿದ ಭೂಪರು!

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2026

Leave a Comment