ಪಾಲನೆ ನ್ಯೂಸ್
ಮಂಡ್ಯ: ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿಯಿಂದ ಜ.24ರಂದು ಮಧ್ಯಾಹ್ನ 3.30ಕ್ಕೆ ನಗರದ ಗುತ್ತಲು ಬಡಾವಣೆಯ ಕುವೆಂಪು ಶತಮಾನೋತ್ಸವ ಶಾಲಾ ಆವರಣದಲ್ಲಿ ಬೃಹತ್ ಹಿಂದೂಸಮಾಜೋತ್ಸವ ನಡೆಯಲಿದೆ ಎಂದು ಸಮಿತಿಯ ರಾಜಶೇಖರ್‌ತಿಳಿಸಿದರು.
ಸನಾತನ ಧರ್ಮದ ಉಳಿವು, ಹಿಂದೂ ಸಮಾಜದ ಏಕತೆ ಮತ್ತು ಸಂಸ್ಕೃತಿಯಮೌಲ್ಯಗಳನ್ನು ಜಾಗೃತಿಗಾಗಿ ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಹಿಂದೂ ಸಮಾಜೋತ್ಸವವನ್ನು ಪ್ರಾರಂಭಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲಾದ್ಯಂತ ಸುಮಾರು 60ಕ್ಕೂ ಹೆಚ್ಚು ಹಿಂದೂ ಸಮಾಜೋತ್ಸವ ಆಯೋಜಿಸಲಾಗಿದ್ದು, ಇದರ ಭಾಗವಾಗಿ ಮಂಡ್ಯದಲ್ಲೂ ಸಹ ಬೃಹತ್ ಹಿಂದೂ ಸಮಾಜೋತ್ಸವ ನಡೆಯಲಿದೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಗುತ್ತಲು ರಸ್ತೆಯ ಪ್ರಮುಖ ವೃತ್ತದಿಂದ ಆರಂಭವಾಗುವ ಶೋಭಾಯಾತ್ರೆ ಬೇಬಿ ಬೆಟ್ಟದ ಶ್ರೀ ರಾಮಯೋಗೀಶ್ವರ ಮಠದ ಶ್ರೀ ಶಿವಬಸಪ್ಪಸ್ವಾಮೀಜಿ ಅವರ ಪಾದಪೂಜೆಯೊಂದಿಗೆ ಪ್ರಾರಂಭವಾಗಿ ವೇದಿಕೆಯವರೆವಿಗೂ ಜಾನಪದ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆ ನಡೆಯಲಿದೆ. ಗುತ್ತಲು ಮುಖ್ಯ ರಸ್ತೆಯ ಪ್ರಮುಖ ವೃತ್ತದಲ್ಲಿ ವಿವಿಧ ಜಾನಪದ ಕಲಾತಂಡದೊಂದಿಗೆ ಭವ್ಯ ಶೋಭಾ ಯಾತ್ರೆ ನಡೆಯಲಿದೆ ಎಂದರು.

ವಾಗ್ನಿ ಹಾಗೂ ಸಾಮಾಜಿಕ ಕಾರ್ಯಕರ್ತ ನವೀನ್ ಸುಬ್ರಹ್ಮಣ್ಯ ಸಮಾಜದ ಏಕತೆ ಮತ್ತು ಧರ್ಮದ ರಕ್ಷಣೆ ಕುರಿತು ಮಾತನಾಡುವರು.
ಸಮಾರಂಭದಲ್ಲಿ ಸುಮಾರು 1500ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು, ಸಮಾಜದಲ್ಲಿ ಸಂಘಟಿತ ಶಕ್ತಿಯನ್ನು ಪ್ರದರ್ಶಿಸುವ ಕಾರ್ಯಕ್ರಮ ಇದಾಗಿದ್ದು, ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಸಮಿತಿಯ ದೊಡ್ಡಾಚಾರಿ, ಲೋಕೇಶ್, ರಾಕೇಶ್, ಧಾಮೋಧರ ಶಣೈ, ನಂದೀಶ್ ಅವರು ಗೋಷ್ಠಿಯಲ್ಲಿದ್ದರು.
ಪಾಲನೆ.ಇನ್ ವಾಟ್ಸ್ ಆಪ್ ಗುಂಪಿಗೆ ಸೇರಿರಿ.


