NEWS

ಅಂತರರಾಷ್ಟ್ರೀಯ ಗ್ಯಾಂಗ್‌ಸ್ಟರ್: US ಅಧ್ಯಕ್ಷ ಟ್ರಂಪ್ ವಿರುದ್ಧ UK ವಾಗ್ದಾಳಿ

ಪಾಲನೆ ನ್ಯೂಸ್

ಲಂಡನ್: ‘ತನಗೆ ಬೇಕಾದ ಇತರರ ವಸ್ತುವನ್ನು ಬಲಪ್ರಯೋಗದಿಂದ ವಶಪಡಿಸಿಕೊಳ್ಳುವ ಪ್ರವೃತ್ತಿಯ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಅಂತರರಾಷ್ಟ್ರೀಯ ಗ್ಯಾಂಗ್‌ಸ್ಟರ್‌ನಂತೆ ವರ್ತಿಸುತ್ತಿದ್ದಾರೆ’ ಎಂದು ಬ್ರಿಟನ್ ಸಂಸದ ಎಡ್ ಡೇವ್ ಕಟುವಾಗಿ ಟೀಕಿಸಿದ್ದಾರೆ.

ಗ್ರೀನ್‌ಲ್ಯಾಂಡ್‌ ವಶಪಡಿಸಿಕೊಳ್ಳಲು ಸೇನೆ ಕಳುಹಿಸುವ ಟ್ರಂಪ್‌ ಹೇಳಿಕೆ ಕುರಿತಂತೆ ಬ್ರಿಟನ್‌ ಸಂಸತ್‌ನಲ್ಲಿ ನಡೆದ ಚರ್ಚೆಯಲ್ಲಿ, ಡೇವ್ ಈ ಹೇಳಿಕೆ ನೀಡಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಬ್ರಿಟನ್‌ನ ವಿದೇಶಾಂಗ ಸಚಿವ ಯೆವೆಟ್ ಕೂಪರ್ ಅವರ ಮಾತಿಗೆ ಪ್ರತಿಕ್ರಿಯಿಸಿದ ಡೇವ್, ‘ಟ್ರಂಪ್ ‘ಪೀಡಕ’ರಾಗಿದ್ದಾರೆ. ಇದರ ವಿರುದ್ಧ ಐರೋಪ್ಯ ಒಕ್ಕೂಟದ ಜತೆ ನಿಲ್ಲಲು ಬ್ರಿಟನ್ ಒಗ್ಗಟ್ಟು ಪ್ರದರ್ಶಿಸಬೇಕು. ಅವರನ್ನು ಹಿಮ್ಮೆಟ್ಟಿಸಬೇಕು’ ಎಂದಿದ್ದಾರೆ.

‘ಮಿತ್ರ ರಾಷ್ಟ್ರಗಳ ಸಾರ್ವಭೌಮತ್ವ ಮೆಟ್ಟಿನಿಲ್ಲುವ ಮಾತುಗಳನ್ನಾಡುತ್ತಿರುವ ಟ್ರಂಪ್, ಅಂತರರಾಷ್ಟ್ರೀಯ ಗ್ಯಾಂಗ್‌ಸ್ಟರ್‌ನಂತೆ ವರ್ತಿಸುತ್ತಿದ್ದಾರೆ. ನ್ಯಾಟೊವನ್ನು ಸಂಪೂರ್ಣವಾಗಿ ನೆಲಕಚ್ಚಿಸುವ ಬೆದರಿಕೆಯೊಡ್ಡುತ್ತಿದ್ದಾರೆ. ಗ್ರೀನ್‌ಲ್ಯಾಂಡ್ ತನಗೆ ಬೇಕು ಎಂದು ಹಠಕ್ಕೆ ಬಿದ್ದಿರುವ ಟ್ರಂಪ್, ಐರೋಪ್ಯ ಒಕ್ಕೂಟದ ಏಳು ರಾಷ್ಟ್ರಗಳ ಮೇಲೆ ಸುಂಕ ಹೇರಿಕೆಯ ಭೀತಿ ಹುಟ್ಟಿಸುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಮೈಷುಗರ್ ಖಾಸಗೀಕರಣಕ್ಕೆ ತನಿಖಾ ಸಮಿತಿ ರಚನೆ: ಸುನಂದಾ ಜಯರಾಂ

ಡಾ. ಬಾಬು ಜಗಜೀವನ್ ರಾಂ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಿ

ಸಾರ್ವಜನಿಕ ಪ್ರದೇಶದಲ್ಲಿಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ತೆರವುಗೊಳಿಸಲು ಆದೇಶ

Leave a Comment