ಜ.23 ರಂದು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿ ಬೋಧನೆ
ಪಾಲನೆ ನ್ಯೂಸ್
ಮಂಡ್ಯ: ಅಂತಾರಾಷ್ಟ್ರೀಯ ಮತದಾನ ದಿನಾಚರಣೆಯನ್ನು ಜ.25 ರಂದು ನಗರದ ಡಿ. ದೇವರಾಜ ಅರಸು ಸಭಾಂಗಣದಲ್ಲಿ ಆಯೋಜಿಸಲು ನಿಗದಿಗೊಳಿಸಲಾಗಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಅಧಿಕಾರಿಗಳಿಗೆ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮತದಾನ ದಿನಾಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಲುಪಿಸಬೇಕು ಎಂದು ಸೂಚನೆ ನೀಡಿದರು.
ಮತದಾನ ಪ್ರತಿಜ್ಞಾವಿಧಿ ಬೋಧನೆ

ಜ.23ರಂದು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧನೆ ಮಾಡಲಾಗುವುದು ಎಂದು ತಿಳಿಸಿದರಲ್ಲದೆ, ಅಂತಾರಾಷ್ಟ್ರೀಯ ಮತದಾನ ದಿನಾಚರಣೆಯ ಪ್ರಯುಕ್ತ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲಾ ಮಟ್ಟದ ಎಲ ಅಧಿಕಾರಿಗಳೂ ಕಡ್ಡಾಯವಾಗಿ ಅಂತಾರಾಷ್ಟ್ರೀಯ ಮತದಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವ ಹಿಸಬೇಕು ಎಂದು ನಿರ್ದೇಶನ ನೀಡಿದರು.
ಉಪವಿಭಾಗಾಧಿಕಾರಿ ಚುನಾವಣಾ ತಹಸಿಲ್ದಾರ್ ರವಿಶಂಕರ್, ಹಿಂದುಳಿದ ವರ್ಗದ ಇಲಾಖೆಯ ಜಿಲ್ಲಾಧಿಕಾರಿ ಮಂಜುಳಾ, ಮುಜರಾಯಿ ತಹಸಿಲ್ದಾರ್ ತಮ್ಮೇಗೌಡ, ನಗರಸಭಾ ಪೌರಾಯುಕ್ತ ಯು.ಪಿ.ಪಂಪಾಶ್ರೀ, ತಹಸಿ ಲ್ದಾರ್ ವಿಶ್ವನಾಥ್, ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಪೂರ್ವಭಾವಿ ವಿವಿಧ ಸಭೆಯಲ್ಲಿ ಭಾಗವಹಿಸಿದ್ದರು.
ಪಾಲನೆ.ಇನ್ ವಾಟ್ಸ್ ಆಪ್ ಗುಂಪಿಗೆ ಸೇರಿರಿ.


