NEWS

ಕರ್ನಾಟಕ ವಿಧಾನಮಂಡಲದ ಇತಿಹಾಸದಲ್ಲಿ ಇಂದು ಕರಾಳ ದಿನ: ಆ‌ರ್. ಅಶೋಕ

ಪಾಲನೆ ನ್ಯೂಸ್

ಬೆಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ ಟೀಕಿಸಿದ್ದಾರೆ

ಜಂಟಿ ಅಧಿವೇಶನದ ಎರಡನೇ ದಿನವಾದ ಇಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ತಾವೇ ಸಿದ್ಧಪಡಿಸಿದ್ದ ಒಂದು ನಿಮಿಷದ ಭಾಷಣವನ್ನು ಓದಿ ಸದನದಿಂದ ಹೊರನಡೆಯುತ್ತಿದ್ದಾಗ ಕಾಂಗ್ರೆಸ್‌ ಸದಸ್ಯರು ಅವರನ್ನು ಅಡ್ಡಗಟ್ಟಿದ ವಿಚಾರವನ್ನು ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ವಿಡಿಯೊ ಜೊತೆಗೆ ಪೋಸ್ಟ್ ಹಂಚಿಕೊಂಡಿರುವ ಅವರು, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋತ್ ಅವರು ಇಂದು ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿ ತಮ್ಮ ಭಾಷಣವನ್ನು ಮಂಡಿಸುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಅನುಚಾನವಾಗಿ ಪಾಲಿಸಿದ್ದಾರೆ.

ಆದರೆ, ಕಾಂಗ್ರೆಸ್ ಪಕ್ಷದ ಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ಸಂವಿಧಾನಕ್ಕೆ, ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ. ಸದನದ ಸಂಪ್ರದಾಯ ಹಾಗೂ ನಿಯಮಾವಳಿಗಳನ್ನ ಗಾಳಿಗೆ ತೂರಿ ರಾಜ್ಯಪಾಲರ ಭಾಷಣಕ್ಕೆ ಮೂಲಕ ಅಡ್ಡಿ ಪಡಿಸುವ ಮೂಲಕ ಸದನಕ್ಕೆ ಅಪಮಾನ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಸದನದ ಹಿರಿಯ ಸದಸ್ಯರು ಹಾಗೂ ಕಾನೂನು ಸಚಿವರಾದ ಎಚ್‌.ಕೆ. ಪಾಟೀಲ್ ಅವರೇ ಸ್ವತಃ ಈ ಕೆಟ್ಟ ಸಂಪ್ರದಾಯಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟಿರುವುದು ನಿಜಕ್ಕೂ ನಾಚಿಕೆಗೇಡು ಮತ್ತು ಖಂಡನೀಯ. ಕಾನೂನು ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಆ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯುವ ಅರ್ಹತೆ ಇಲ್ಲ ಎಂದಿದ್ದಾರೆ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಬಿಸಿಲಿನ ಬೇಗೆ ಪ್ರಾಣಿ, ಪಕ್ಷಿಗಗೆ ನೀರು ಕೊಡಿ

ನೂತನ ಸಿಎಂ ಆಗಿ ಜೋಸೆಫ್ ವಿಜಯ್ ಪ್ರಮಾಣ ವಚನ

ಜ.19 ರಿಂದ 31 ವರೆಗೆ ಜಿಲ್ಲಾದ್ಯಂತ ದಢಾರ ರುಬೆಲ್ಲ ನಿರ್ಮೂಲನೆಗಾಗಿ ವಿಶೇಷ ಪಾಕ್ಷಿಕ ಲಸಿಕಾ ಅಭಿಯಾನ: ಡಾ.ಕುಮಾರ

Leave a Comment