NEWS

ಜನವರಿ 26ರಂದು 77ನೇ  ಗಣರಾಜ್ಯೋತ್ಸವ ದಿನಾಚರಣೆ

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲಾ,ಜಿಲ್ಲಾಡಳಿತದಿಂದ 77ನೇ ಗಣರಾಜ್ಯೋತ್ಸವ ದಿನವನ್ನು ಜನವರಿ 26ರಂದು 9 ಗಂಟೆಗೆ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ .ಕುಮಾರಸ್ವಾಮಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ ಎಂ ನರೇಂದ್ರಸ್ವಾಮಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಮಂಡ್ಯ ವಿಧಾನಸಭಾ ಶಾಸಕರಾದ ಪಿ.ರವಿಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ವಿಧಾನ ಸಭಾ ಶಾಸಕರುಗಳಾದ ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜು, ಕೆ.ಎಂ ಉದಯ, ರಾಜ್ಯ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್ ಆತ್ಮಾನಂದ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷರಾದ ಡಾ. ಮೂರ್ತಿ, ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ,  ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ ಭಾಗವಹಿಸಲಿದ್ದಾರೆ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ನಟಿ ತಮನ್ನಾಈಗ ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿ

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

ಡಿಸೆಂಬರ್ 21 ರಿಂದ 24 ರವರೆಗೆ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

Leave a Comment