NEWS

ಫೆಬ್ರವರಿ ಮಾಹೆಯಲ್ಲಿ ಬರುವ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ: ಬಿ.ಸಿ ಶಿವಾನಂದ ಮೂರ್ತಿ

ಪಾಲನೆ ನ್ಯೂಸ್

‌ಮಂಡ್ಯ: ಫೆಬ್ರವರಿ ಮಾಹೆಯಲ್ಲಿ ಬರುವ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಮುದಾಯದ ಮುಖಂಡರುಗಳು ಸಮನ್ವಯ ಸಾಧಿಸಿ ಜಯಂತಿಗಳ ಆಚರಣೆಯ ದಿನದಂದು ಜಿಲ್ಲಾಡಳಿದ ಗೌರವ ದಕ್ಕೆಬಾರದ ಹಾಗೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಫೆಬ್ರವರಿ 1 ರಂದು ಮಡಿವಾಳ ಮಾಚಿದೇವ ಜಯಂತಿಯನ್ನು ಮಂಡ್ಯ ನಗರದ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಸದರಿ ದಿನದಂದು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗುವುದು. ಸಮುದಾಯದಲ್ಲಿ ಸಾಧನೆ ಮಾಡಿದ ಐದು ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದರು ತಿಳಿಸಿದರು.

ಫೆಬ್ರವರಿ 10 ರಂದು ಕಾಯಕ ಶರಣ ಜಯಂತಿಯನ್ನು ಆಚರಿಸಲಾಗುವುದು. ಸದರಿ ದಿನದಂದು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗುವುದು. ಸಮುದಾಯದಲ್ಲಿ ಸಾಧನೆ ಮಾಡಿದ ಐದು ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು. ಫೆಬ್ರವರಿ 15 ರಂದು ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸಲಾಗುವುದು. ಸಮುದಾಯ ಮುಖಂಡರುಗಳೊಂದಿಗೆ ಚರ್ಚಿಸಿ ಸೂಕ್ತ ಜಾಗದಲ್ಲಿ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.

ಫೆಬ್ರವರಿ 19 ರಂದು ಛತ್ರಪತಿ ಶಿವಾಜಿ ಜಯಂತಿ ಮತ್ತು ಫೆಬ್ರವರಿ 20 ರಂದು ಸಂತ ಕವಿ ಸರ್ವಜ್ಞ ಜಯಂತಿಯನ್ನು ನಗರದ ಕಲಾಭವನದಲ್ಲಿ ಆಚರಿಸಲಾಗುವುದು. ವಾಡಿಕೆಯಂತೆ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಮತ್ತು ಸಮುದಾಯದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮಾಡಲಾಗುವುದು ಎಂದರು.

ಸದರಿ ಮಹಾನೀರ ಜಯಂತಿಗಳನ್ನು ಮಾದರಿಯಾಗುವ ನಿಟ್ಟಿನಲ್ಲಿ ಆಚರಿಸೋಣ. ಮಹನೀಯರ ಮೌಲ್ಯ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸಲು ಜಯಂತಿಗಳನ್ನು ಆಚರಿಸಲಾಗುತ್ತದೆ. ಸಮುದಾಯದ ಮುಖಂಡರುಗಳು ಸಹಕರಿಸಿ ಎಂದು ಹೇಳಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ ನಂದೀಶ್, ಡಿ.ದೇವರಾಜು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್ ಸಂದೇಶ್ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

2026ರ ಐಪಿಎಲ್ ಗಾಗಿ RCB ಜೆರ್ಸಿ ಅನಾವರಣ: ಹೊಸ ಋತುವಿಗೆ ವಿಶಿಷ್ಟ ಲೋಗೋ

ಜನಗಣತಿ ಕಾರ್ಯದಿಂದ ಪ್ರೌಢಶಾಲಾ ಶಿಕ್ಷಕರನ್ನು ಕೈ ಬಿಡುವಂತೆ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಆಗ್ರಹ-

ಜಿ. ಪಂ. ಸಿಇಓ ನಂದಿನಿ ಕೆ. ಆರ್. ಅವರು ಶ್ರೀರಂಗಪಟ್ಟಣ ತಾಲೂಕಿನ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Comment