NEWS

ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವುದು

ಪಾಲನೆ ನ್ಯೂಸ್

‌ಮಂಡ್ಯ: • ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿ/ರಾಷ್ಟ್ರೀಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ರವರು ಸೂಚಿಸಿದರು.

• ದಿನಾಂಕ: 22-01-2026 ರಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಜರುಗಿದ್ದು, ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು ಮತ್ತು ಪದೇ ಪದೇ ರಸ್ತೆ ಅಪಘಾತಗಳು ಸಂಭವಿಸುವ ಸ್ಥಳಗಳನ್ನು ಪತ್ತೆಹಚ್ಚಿ, ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

• ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಹೆದ್ದಾರಿಗಳಲ್ಲಿ ಅಪಘಾತಗಳು ಸಂಭವಿಸುವ ಕಪ್ಪು ಸ್ಥಳಗಳನ್ನು (Black Spot) ಗುರುತಿಸಿ, ಸುಮಾರು 8.15 ಕೋಟಿ ವೆಚ್ಚದಲ್ಲಿ ಅಂದಾಜು ಪಟ್ಟಿಯನ್ನು ತಯಾರಿಸಿ ರಾಜ್ಯ ರಸ್ತೆ ಸುರಕ್ಷತಾ ಸಮಿತಿಗೆ ಸಲ್ಲಿಸಲಾಗಿದೆ.

• ವಿಶ್ವೇಶ್ವರಯ್ಯ (V.C) ನಾಲೆ ಜಿಲ್ಲೆಯಲ್ಲಿ ಸುಮಾರು 530 ಕಿ.ಮೀ. ಇದ್ದು, ವಿಶ್ವೇಶ್ವರಯ್ಯ ನಾಲಾ ರಸ್ತೆ ಬದಿಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಮಿತಿಯನ್ನು ರಚಿಸಿದ್ದು, ರಸ್ತೆ ತಿರುವುಗಳಲ್ಲಿ ಕ್ರ್ಯಾಶ್ ಬ್ಯಾರಿಯರ್ ಅಳವಡಿಸಲು ರೂ 20 ಕೋಟಿ ಮೊತ್ತದಲ್ಲಿ ಕ್ರಿಯಾ ಯೋಜನೆಯನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.

• ರಾಷ್ಟ್ರೀಯ ಹೆದ್ದಾರಿಗಳಿಗೆ ಹೊಂದಿಕೊಂಡಂತಿರುವ ರಸ್ತೆಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ರಂಬಲ್ ಸ್ಟ್ರಿಪ್ ಅಳವಡಿಸಿ, ಬಣ್ಣ ಬಳೆದು ಕ್ಯಾಟ್ ಐಸ್ ಗಳನ್ನು ಹಾಗೂ ಸೈನ್ ಬೋರ್ಡ್ ಗಳನ್ನು ಅಳವಡಿಸಲು ಸೂಚಿಸಲಾಗಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಗೃಹ ಲಕ್ಷ್ಮಿ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಸೀಡಿಂಗ್ ಮತ್ತು ಇ-ಕೆ.ವೈ.ಸಿ ಮಾಡಿಸಿ

ಇಂಡೀಸ್ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ಜಯ

ವಿಶ್ವಮಾನವ ಧರ್ಮ ಮಹಾಅಧಿವೇಶನದಲ್ಲಿ ಭಾಗವಹಿಸಲು ಕರೆ

Leave a Comment