NEWS

ಜನವರಿ 25 ರಂದು 16ನೇ ರಾಷ್ಟ್ರೀಯ ಮತದಾರರ ದಿನ‌

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರುಗಳ ಸಹಯೋಗದೊಂದಿಗೆ 16ನೇ ರಾಷ್ಟ್ರೀಯ ಮತದಾರ ದಿನವ ಕಾರ್ಯಕ್ರಮವನ್ನು ಜನವರಿ 25ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ  ಏರ್ಪಡಿಸಲಾಗಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರಾದ ಸುಬ್ರಹ್ಮಣ್ಯ ಜೆ.ಎನ್. ರವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ.

ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಆನಂದ್ ಎಮ್. ರವರು ಘನ ಉಪಸ್ಥಿತಿ ವಹಿಸಲಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಡಾ. ಕುಮಾರ ರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಆರಕ್ಷಕ ಅಧೀಕ್ಷಕರಾದ ಶೋಭಾರಾಣಿ ವಿ. ಜೆ ರವರು ಭಾಗವಹಿಸಲಿದ್ದಾರೆ.

ಜಿಲ್ಲಾ ಪಂಚಾಯತ್ ಮುಖ್ಯ  ಕಾರ್ಯನಿರ್ವಹಣಾಧಿಕಾರಿಗಳಾದ ನಂದಿನಿ ಕೆ. ಆರ್ ರವರು ಪ್ರತಿಜ್ಞಾವಿಧಿ  ಬೋಧಿಸಲಿದ್ದಾರೆ.

ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಯಾದ ಬಿ. ಸಿ ಶಿವಾನಂದಮೂರ್ತಿ ರವರು ಪ್ರಾಸ್ತವಿಕ ನುಡಿ ನುಡಿಯಲಿದ್ದಾರೆ.

ಉಪ ವಿಭಾಗ ಅಧಿಕಾರಿಯಾದ ಎಂ ಶಿವಮೂರ್ತಿ,  ಮಂಡ್ಯ ತಾಲ್ಲೂಕಿನ ತಾಸಿಲ್ದಾರ್ ರಾಧ ವಿಶ್ವನಾಥ್ ಎಸ್, ನಗರಸಭೆ ಪೌರಾಯುಕ್ತರಾದ ಪಂಪಶ್ರೀ ಯು.ಪಿ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಪಂಜಾಬ್‌ಗೆ 6 ವಿಕೆಟ್‌ಗಳ ಗೆಲುವು

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ : ಡಿಕೆಶಿ ಪಾರು

ಡಿ. 21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ : ವಿಶ್ವನಾಥ್

Leave a Comment