NEWS

ಅತಿಥಿ ಗೃಹದಲ್ಲಿ ರಾಜೀವ್ ಗೌಡ ವಿಚಾರಣೆ

ಪಾಲನೆ ನ್ಯೂಸ್

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತಗೆ ಮೊಬೈಲ್ ಕರೆ ಮಾಡಿ ಧಮ್ಮಿ ಹಾಕಿದ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್‌ ಗೌಡ ಅವರನ್ನು ಪೊಲೀಸ್ ಅತಿಥಿ ಗೃಹದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ರಾಜೀವ್ ಗೌಡ ಅವರಿಗೆ ಮಂಗಳೂರಿನಲ್ಲಿ ಮೂರು ದಿನ ಆಶ್ರಯ ನೀಡಿದ ಉದ್ಯಮಿ ಮೈಕಲ್ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಡರಾತ್ರಿ ಈ ಇಬ್ಬರನ್ನು ಕರೆತಂದು ನಗರ ಪೊಲೀಸ್ ಠಾಣೆ ಬಳಿಯ ಅತಿಥಿ ಗೃಹದಲ್ಲಿ ಇರಿಸಲಾಗಿದೆ.

ಬೆಳಿಗ್ಗೆಯಿಂದಲೇ ಎಎಸ್‌ಪಿ ಜಗನ್ನಾಥ ರೈ, ಡಿವೈಎಸ್‌ಪಿ ರವಿಕುಮಾ‌ರ್, ತನಿಖಾಧಿಕಾರಿ ಇನ್ ಸ್ಪೆಕ್ಟರ್ ಆನಂದ್ ವಿಚಾರಣೆ ನಡೆಸುತ್ತಿದ್ದಾರೆ.

ಸೀನ್ ಆಫ್ ಕ್ರೈಂ ಆಫೀಸರ್ಸ್ (ಸೋಕೊ) ತಂಡ ಸಹ ವಿಚಾರಣೆಯಲ್ಲಿ ಭಾಗಿಯಾಗಿದೆ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

An architect isn’t someone; he is visionary

ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ವಿಶೇಷ ಪರಿಷ್ಕರಣೆ

ಅಧ್ಯಾಪನ ಮತ್ತು ಅಧ್ಯಯನ ಸಂಶೋಧನೆಗೆ ಬಹಳ ಮುಖ್ಯವಾಗಿದೆ: ಪ್ರೊ.ಕೆ.ಶಿವಚಿತ್ತಪ್ಪ‌

Leave a Comment