NEWS

ವಿದ್ಯಾರ್ಥಿ ಸಂಘದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಪಾಲನೆ ನ್ಯೂಸ್

ಮಂಡ್ಯ: ಶ್ರೀ ಗೀತಾ ಪ್ರೌಢಶಾಲೆ ಆವರಣದಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೂಪ ಸಮಾರಂಭವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ. ಪ್ರಕಾಶ್ ಉದ್ಘಾಟಿಸಿದರು.

ನಂತರ ಮಾತನಾಡಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ ಎಸ್ಎಸ್ಎಲ್‌ಸಿ ಯಲ್ಲಿ ಅತ್ಯು ತ್ತಮ ಅಂಕವನ್ನಗಳಿಸಿ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು ನಂತರ ತಮ್ಮ ಬಾಲ್ಯದ ಶಾಲಾ ದಿನಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.

ಗೀತಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಸ್. ಬಿ. ಶ್ರೀ ಕಂಠಯ್ಯ ಮಾತನಾಡಿ ಶಾಲೆಯಲ್ಲಿ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು ಇದರ ಸದ್ಬಳಕೆಯನ್ನು ವಿದ್ಯಾರ್ಥಿಗಳು ಮಾಡಿಕೊಂಡು ಶಾಲೆಗೆ ಕೀರ್ತಿ ತರುವಂತೆ ಸಲಹೆ ನೀಡಿದರು.

ಎಸ್‌ಎಸ್‌ಎಲ್‌ಸಿ ಯಲ್ಲಿ ಅತ್ಯುತ್ತಮ ಅಂಕಗಳಿಸಿದವರಿಗೆ ಪ್ರೋತ್ಸಾಹ ಧನ ನೀಡಲಾಯಿತು ನಂತರ ವಿದ್ಯಾರ್ಥಿಗಳು ಸಾಂಸೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಮೀನಾಕ್ಷಿ ಪುಟ್ಟಸ್ವಾಮಿ ಶಾಲಾ ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಉಮೇಶ್ ಮಂಡ್ಯ ನಗರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ನಿರ್ದೇಶಕ ಎಂ. ಕೃಷ್ಣ ಶ್ರೀ ಗೀತಾ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ. ಎಸ್. ಬಸವರಾಜು ಆಡಳಿತ ಅಧಿಕಾರಿ ಕೆ. ಎಸ್. ಮಹಾದೇವೇಗೌಡ ನಿರ್ದೇಶಕ ಆನಂದ್ ಭಾಗವಹಿಸಿದ್ದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಆಫ್ಘನ್ ಸೇನೆ ಪ್ರತಿದಾಳಿ ; 15 ಔಟ್‌ಪೋಸ್ಟ್ ವಶ ಪಡಿಸಿಕೊಂಡ ಆಫ್ಘನ್ ಮಿಲಿಟರಿ

ಬಿಡದಿ ಟೌನ್ ಶಿಪ್ ಯೋಜನೆಯಿಂದ ಕುಮಾರಸ್ವಾಮಿ ಅವರಿಗೆ ಲಾಟರಿ : ಡಿಸಿಎಂ

ಭಾರತ ಕ್ರಿಕೆಟ್‌ ತಂಡದ ವಿರುದ್ದ ಪಂದ್ಯ ಬಹಿಷ್ಕಾರ?

Leave a Comment