NEWS

ಫೆ.21,22 ಬೂದನೂರು ಉತ್ಸವ ಅದ್ಧೂರಿಯಾಗಿ ಆಚರಣೆ

ಬುದನೂರು ಉತ್ಸವದಲ್ಲಿ ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ 3 ದಿನಗಳ ಕಾಲ ಹೆಲಿ ಟೂರಿಸಂ ಆಯೋಜನೆಕೇರಳದಲ್ಲಿ ಬಿಟ್ಟರೆ ಅನಂತಪದ್ಮನಾಭ ದೇವಾಲಯ ಬುದನೂರಿನಲ್ಲಿ ಇದೆ, ಇದು ಜಿಲ್ಲೆಗೆ ಹೆಮ್ಮೆಯ ಸಂಗತಿ -ಪಿ.ರವಿ ಕುಮಾರ್

ಪಾಲನೆ ನ್ಯೂಸ್

ಮಂಡ್ಯ: ಕಳೆದ ಬಾರಿಯ ಬುದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಬುದನೂರು ಉತ್ಸವವನ್ನು ಆಚರಿಸಲಾಗುವುದು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ ರವಿಕುಮಾರ್ ಅವರು ಹೇಳಿದರು.

ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಬೂದನೂರು ಉತ್ಸವ -2026 ರ ಪೂರ್ವ ತಯಾರಿ ಚಟುವಟಿಕೆಗಳ ಕುರಿತು ಚರ್ಚಿಸಲು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ಬಾರಿ ಸರ್ಕಾರದಿಂದ 15 ಲಕ್ಷ ಹಣ ಮಾತ್ರ ಬೂದನೂರು ಉತ್ಸವಕ್ಕೆ ಬಿಡುಗಡೆ ಮಾಡಲಾಗಿತ್ತು ಯಾರಿಂದಲೂ ಹಣ ಕೇಳದೆ ಸುಮಾರು 1 ಕೋಟಿ ವೆಚ್ಚದಲ್ಲಿ ಕಳೆಜ ಬಾರಿಯ ಬುದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು ಎಂದು ಹೇಳಿದರು.

ಸ್ಥಳೀಯ ಗ್ರಾಮಸ್ಥರ ಹಾಗೂ ಸಾರ್ವಜನಿಕರ ಸಹಕಾರದಿಂದ ಈ ಬಾರಿಯ ಬುದನೂರು ಉತ್ಸವವನ್ನು ವಿಜೃಂಭಣೆಯಿಂದ ಆಚರಿಸೋಣ. ಪ್ರವಾಸಿಗರನ್ನು ಹಾಗೂ ಸ್ಥಳೀಯರಿಗಾಗಿ ಸದರಿ ವರ್ಷದ ಉತ್ಸವದಲ್ಲಿ ಫೆಬ್ರವರಿ 20 ರಿಂದ 3 ದಿನಗಳ ಕಾಲ ಹೆಲಿ ಟೂರಿಸಂ ಆಯೋಜನೆ ಮಾಡಲಾಗುತ್ತದೆ. ಸ್ಥಳೀಯರು ಹಾಗೂ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಬೆಲೆ ನಿಗದಿಪಡಿಸಲಾಗುವುದು. ಹೆಲಿಕಾಪ್ಟರ್ ಮೇಲಿಂದ ಸಾರ್ವಜನಿಕರು ಬುದನೂರು ಉತ್ಸವವನ್ನು ಕಣ್ತುಂಬಿಕೊಳ್ಳಬಹುದು ಎಂದು ಹೇಳಿದರು.

ಕೇರಳದಲ್ಲಿ ಬಿಟ್ಟರೆ ಅನಂತಪದ್ಮನಾಭ ದೇವಾಲಯ ಇರುವುದು ಮಂಡ್ಯ ಜಿಲ್ಲೆಯ ಬೂದನೂರಿನಲ್ಲಿ ಮಾತ್ರ ಇದು ನಮ್ಮ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಬೂದನೂರು ಉತ್ಸವಕ್ಕೆ ಬರಲು ಸಾರ್ವಜನಿಕರಿಗೆ ವಾಹನಗಳ ಸೌಲಭ್ಯ ಹಾಗೂ ವಾಹನಗಳಿಗೆ ಅಚ್ಚುಕಟ್ಟಾಗಿ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.

ವಿವಿಧ ಕಲಾತಂಡಗಳೊಂದಿಗೆ ಹಳೆಬೂದನೂರಿನಿಂದ ಮೆರವಣಿಗೆ ಪ್ರಾರಂಭವಾಗಲಿದೆ. ಸ್ಥಳೀಯರು ಸಹಕರಿಸಿದರೆ 37 ಪೂಜಾ ಕುಣಿತ ತಂಡಗಳನ್ನು ಮೆರವಣಿಗೆಯಲ್ಲಿ ಆಯೋಜಿಸಿ ಅದ್ಧೂರಿಯಾಗಿ ಮೆರವಣಿಗೆ ಮಾಡಲಾಗುವುದು. ಆಹಾರ ಮೇಳವನ್ನು ಸಹ ಸದರಿ ಉತ್ಸವದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.

ಕಸಬಾ ಹೋಬಳಿ ಪ್ರತಿ ಮನೆಯಿಂದ ರಂಗೋಲಿ ಸ್ಪರ್ಧೆ ಆಯೋಜಿಸಲಾಗುವುದು. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಮೂರು ಜನರಿಗೆ ನಗದು ಬಹುಮಾನ ನೀಡಲಾಗುವುದು. ಭಾಗವಹಿಸಿದ ಎಲ್ಲಾ ಸ್ಪರ್ದಾಳುಗಳಿಗೆ ವೈಯಕ್ತಿಕವಾಗಿ ನನ್ನ ಕಡೆಯಿಂದ ವಿಶೇಷ ಉಡುಗೊರೆಯನ್ನು ನೀಡಲಾಗುವುದು. ಮಕ್ಕಳಿಗೆ ಚಿತ್ರ ಕಲೆ ಸ್ಪರ್ಧೆ ಆಯೋಜನೆ ವಿಜೇತರಿಗೆ ನಗದು ಬಹುಮಾನ ಮತ್ತು ಭಾಗವಹಿಸಿದವರಿಗೆ ಉಡುಗೊರೆಯನ್ನು ನೀಡಲಾಗುವುದು ಎಂದು ತಿಳಿಸಿದರು.

ಸದರಿ ವರ್ಷದ ಬುದನೂರು ಉತ್ಸವದಲ್ಲಿ ಎರಡು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆಯನ್ನು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನೀಡಲಾಗುವುದು. ಗುರು ಕಿರಣ್ ಮತ್ತು ರಾಜೇಶ್ ಕೃಷ್ಣನ್ ಅವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಾತನಾಡಿ 2024 ರಲ್ಲಿ ಬೂದನೂರು ಉತ್ಸವವನ್ನು ಯಶಸ್ವಿಯಾಗಿ ಆಚರಣೆ ಮಾಡಲಾಗಿತ್ತು. ಬೂದನೂರಿನ ಕಾಶಿ ವಿಶ್ವನಾಥ ಮತ್ತು ಅನಂತಪದ್ಮನಾಭಯದ ವಾಸ್ತು ಶಿಲ್ಪ ಬೆಲೂರು ಹಳೇಬೀಡಿನಷ್ಟೆ ಸುಂದರವಾಗಿದೆ. ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ದೇವಾಲಯಗಳಾಗಿ ಹೊರಹೊಮ್ಮಿದೆ. ದೇವಾಲಯದ ಕಲೆ ವಾಸ್ತುಶಿಲ್ಪವನ್ನು ಉಳಿಸಬೇಕು ಎಂಬ ಸದುದ್ದೇಶದಿಂದ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿಕುಮಾರ್ ಅವರು ಬೂದನೂರು ಉತ್ಸವವನ್ನು ಆಚರಿಸಲು ಮುಂದಾಗಿದ್ದಾರೆ ಎಂದು ಹೇಳಿದರು.

ಬೂದನೂರು ಉತ್ಸವದ ಪೂರ್ವ ತಯಾರಿಗಾಗಿ ಈಗಾಗಲೇ ಸ್ವಾಗತ ಸಮಿತಿ, ವೇದಿಕೆ ಸಮಿತಿ ಸೇರಿದಂತೆ ಸಮೀತಿಗಳನ್ನು ರಚಿಸಲಾಗಿದೆ. ಬೂದನೂರು ಉತ್ಸವದಲ್ಲಿ ಸ್ಥಳೀಯರಿಗೆ ದೇಶಿ ಕ್ರೀಡೆಗಳನ್ನು ಆಯೋಜಿಸಲಾಗುವುದು. ವಸ್ತು ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗುವುದು. ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮಹಿಳೆಯರು ಮತ್ತು ಸಾರ್ವಜನಿಕರಿಗೆ ಪ್ರೋತ್ಸಾಹ ನೀಡಲು ರಂಗೋಲಿ, ಚಿತ್ರ ಕಲೆ, ಅಗ್ಗ ಜಗ್ಗಾಟ. ಕಬ್ಬಡಿ ಸೇರಿದಂತೆ ಇನ್ನಿತರ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ ಎಂದು ಹೇಳಿದರು.

ಗ್ರಾಮಸ್ಥರು ಮತ್ತು ಸ್ಥಳೀಯ ಮುಖಂಡರುಗಳು ಬುದನೂರು ಉತ್ಸವವನ್ನು ತಮ್ಮ ಮನೆಯ ಕಾರ್ಯಕ್ರಮ ಎಂದು ಭಾವಿಸಿ. ಮನಸ್ಥಪ ಬಿಟ್ಟು ಉತ್ಸವವನ್ನು ಯಶಸ್ವಿಯಾಗಿ ಆಚರಣೆ ಮಾಡಬೇಕು ಎಂದು ಹೇಳಿದರು.

ಹುತಾತ್ಮ ದಿನಾಚರಣೆ ಅಂಗವಾಗಿ ಮೌನಾಚರಣೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿಗಾಗಿ ಎಲ್ಲಾ ಅಧಿಕಾರಿಗಳು ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ. ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಅಪರ ಪೊಲೀಸ್ ಅಧೀಕ್ಷಕರಾದ ತಿಮ್ಮಯ್ಯ, ಮಂಡ್ಯ ತಹಶೀಲ್ದಾರ್ ವಿಶ್ವನಾಥ್, ಮುಡಾ ಅಧ್ಯಕ್ಷ ಬಿ.ಪಿ ಪ್ರಕಾಶ್, ಮನ್ ಮುಲ್ ಅಧ್ಯಕ್ಷ ಶಿವಕುಮಾರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ತಮಿಳುನಾಡಿನ ರಾಜಕೀಯದಲ್ಲಿ ಹೊಸ ತಿರುವು

ಹೊನ್ನೇಕೊಡಿಗೆ ಸಂಪರ್ಕ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಲೋಕಾರ್ಪಣೆಗೊಳಿಸಲಿದ್ದಾರೆ.

ಗ್ರಾಮೀಣ ಸಮುದಾಯದವರಿಗೆ ವರವಾದ ಶಿಕ್ಷಣ

Leave a Comment