NEWS

ಕುಷ್ಠರೋಗಿಗಳನ್ನು ಸಾಮಾಜಿಕವಾಗಿ ತಾರತಮ್ಯದಿಂದ ಕಾಣಬೇಡಿ

ಕುಷ್ಠರೋಗಿಗಳನ್ನು ಘನತೆಯಿಂದ ಕಾಣಬೇಕುಡಾ.ಕುಮಾರ

ಪಾಲನೆ ನ್ಯೂಸ್

ಮಂಡ್ಯ: ಕುಷ್ಠರೋಗಿಗಳ ಸಾಮಾಜಿಕವಾಗಿ ತಾರತಮ್ಯದಿಂದ ಕಾಣದೆ ಘನತೆಯಿಂದ ಕಾಣಬೇಕು ಎಂಬ ಅರಿವು ಮೂಡಿಸಲು ಜಾಥಾ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ( ಕುಷ್ಠರೋಗ ನಿರ್ಮೂಲನಾ ವಿಭಾಗ) ಇವರ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ “ತಾರತಮ್ಯವನ್ನು ಕೊನೆಗೊಳಿಸುವುದು ಘನತೆಯನ್ನು ಕಾಪಾಡುವುದು” ಎಂಬ ಘೋಷವಾಕ್ಯದಡಿ ಆಯೋಜಿಸಲಾಗಿದ್ದ ಕುಷ್ಠರೋಗ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕುಷ್ಠರೋಗದ ಗುಣ ಲಕ್ಷಣಗಳ ಹೊಂದಿರುವವರು ತಕ್ಷಣ ಸ್ಥಳೀಯ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಮಹಾತ್ಮ ಗಾಂಧೀಜಿ ಅವರು ಕುಷ್ಠರೋಗ ನಿರ್ಮೂಲನೆಗಾಗಿ ಹೋರಾಡಿದವರು ಅವರ ಪುಣ್ಯಸ್ಮರಣೆಯ ದಿನದಂದು ಕುಷ್ಠರೋಗ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ಅವರು ಮಾತನಾಡಿ ಕುಷ್ಠರೋಗದ ಕುರಿತು ಅರಿವು ಮೂಡಿಸಲು ಜಿಲ್ಲಾ ಮಟ್ಟದ ಜಾಗೃತಿ ಜಾಥಾ ಆಯೋಜಿಸಲಾಗಿದೆ. ಇದರ ಮುಖ್ಯ ಉದ್ದೇಶ ಕುಷ್ಠರೋಗಿಗಳನ್ನು ಸಮಾಜದಲ್ಲಿ ಘನತೆಯಿಂದ ಕಾಣುವುದು ಹಾಗೂ ಗೌರವಯುತವಾಗಿ ನಡೆಸಿಕೊಳ್ಳುವುದಾಗಿದೆ. ಅದರಲ್ಲೂ ಮುಖ್ಯವಾಗಿ ಕುಟುಂಬದವರು ಕುಷ್ಠರೋಗಿಗಳನ್ನು ಉತ್ತಮವಾಗಿ ಕಂಡಾಗ ಮಾತ್ರ ಕುಷ್ಠರೋಗಿಗಳು ಮಾನಸಿಕವಾಗಿ ಕುಗ್ಗದೆ ಸಮಾಜದಲ್ಲಿ ಬದುಕಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಎಲ್ಲರಂತೆ ಕುಷ್ಠರೋಗಿಗಳಿಗೂ ಸಮಾಜದಲ್ಲಿ ಮುಕ್ತ ಅವಕಾಶ ದೊರೆಯಬೇಕು. ಅವರು ಸಹ ಸರ್ವಗಿಣ ಅಭಿವೃದ್ಧಿ ಹೊಂದಬೇಕು ಹೊಂದಬೇಕು ಎಂದು ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಕುಷ್ಠರೋಗಿಗಳ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಧೈರ್ಯ ತುಂಬುವುದು ಸಹ ಇದರ ಉದ್ದೇಶ. ಕುಷ್ಠರೋಗ ಗುಣಮುಖ ವಾಗುವ ಕಾಯಿಲೆ, ಕುಷ್ಠರೋಗಿಗಳನ್ನು ಮುಟ್ಟುವುದರಿಂದ ಕಾಯಿಲೆ ಹರಡುವುದಿಲ್ಲ ಎಂಬುದರ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ ಮೋಹನ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್ ಆಶಾಲತಾ, ಆರ್ ‌.ಸಿ ಎಚ್ ಅಧಿಕಾರಿ ಡಾ.ಕೆ.ಪಿ ಅಶ್ವಥ್, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಸೋಮಶೇಖರ್, ಆರೋಗ್ಯ ನಿರೀಕ್ಷಣಾಧಿಕಾರಿ ವೇಣು ಗೋಪಾಲ್, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಾದ ಬಿ.ಎಸ್ ಅನುಪಮಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕಾವ್ಯಗಳ ಮಹತ್ವ ಯುವ ಜನಾಂಗಕ್ಕೆ ತಲುಪಿಸಬೇಕು: ಪ್ರೊ. ಎಸ್.ಬಿ. ಶಂಕರೇಗೌಡ

Ranji Trophy: ಪಡಿಕ್ಕಲ್ ಶತಕ; ಅಸಾಧಾರಣ ಮೊತ್ತವನ್ನೇ ಬೆನ್ನಟ್ಟಿ ಗೆದ್ದ ಕರ್ನಾಟಕ; ಕ್ವಾರ್ಟರ್ ಫೈನಲ್‌ಗೆ ಲಗ್ಗೆ

ಬೆಂಗಳೂರು: ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ

Leave a Comment