ಪಾಲನೆ ನ್ಯೂಸ್
ಮಂಡ್ಯ : ಫೆಬ್ರವರಿ 21,22ರಂದು ನಡೆಯಲಿರುವ ಬೂದನೂರು ಉತ್ಸವ 2026 ರಲ್ಲಿ ಸದರಿ ವರ್ಷ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಹೆಲಿ ಟೂರಿಸಂ ಅನ್ನು ಆಯೋಜನೆ ಮಾಡಲಾಗಿದೆ.
ಫೆಬ್ರವರಿ 20 ರಿಂದ 3 ದಿನಗಳ ಕಾಲ ಜಿಲ್ಲೆಯಲ್ಲಿ ಬೂದನೂರಿನಲ್ಲಿ ಹೆಲಿ ಟೂರಿಸಂ ಅನ್ನು ಆಯೋಜನೆ ಮಾಡಲಾಗಿದ್ದು ಸಾರ್ವಜನಿಕರು ಹೆಲಿಕಾಪ್ಟರ್ ಮೂಲಕ ಬೂದನೂರು ಉತ್ಸವವನ್ನು ಕಣ್ಣುಂಬಿಕೊಳ್ಳಬಹುದು. ಈ ನಿಟ್ಟಿನಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ಅವರು ಇಂದು ಬೂದನೂರಿನ ಅಮರಾವತಿ ಬಳಿ ಹೆಲಿಕಾಪ್ಟರ್ ನಿಲ್ಲುವ ಸ್ಥಳವನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಅಪರ ಪೊಲೀಸ್ ಅಧೀಕ್ಷಕ ತಿಮ್ಮಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.
ಪಾಲನೆ.ಇನ್ ವಾಟ್ಸ್ ಆಪ್ ಗುಂಪಿಗೆ ಸೇರಿರಿ.


