ಪಾಲನೆ ನ್ಯೂಸ್
ಮಂಡ್ಯ: ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯಕ್ಕೆ ನೂತನ ಕುಲಪತಿಯಾಗಿ ಡಾ. ಕೆ. ಸಿ. ನಾರಾಯಣಸ್ವಾಮಿ ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಕೃಷಿ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಡಾ. ಕೆ. ಸಿ. ನರಾಯಣಸ್ವಾಮಿ ಅವರು ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. ಅವರ ನೇತೃತ್ವದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ. ಮಂಡ್ಯವು ಇನ್ನಷ್ಟು ಪ್ರಗತಿಯನ್ನು ಸಾಧಿಸಲಿದೆ ಎಂಬ ವಿಶ್ವಾಸವನ್ನು ವಿಶ್ವವಿದ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಗಳು, ಅಧ್ಯಾಪಕರು, ವಿಜ್ಞಾನಿಗಳು ಮತ್ತು ಸಿಬ್ಬಂದಿವರ್ಗವು ಡಾ. ಕೆ. ಸಿ. ನಾರಾಯಣಸ್ವಾಮಿ ಅವರನ್ನು ಹಾರ್ದಿಕವಾಗಿ ಅಭಿನಂದಿಸಿ, ಅವರ ಅವಧಿಗೆ ಶುಭಾಶಯಗಳನ್ನು ಕೋರಿದರು.
ಡಾ. ಕೆ.ಸಿ.ನಾರಾಯಣಸ್ವಾಮಿ ಅವರು ಮಾತನಾಡಿ, ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯ, ಮಂಡ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಹಾಗೂ ರೈತಕೇಂದ್ರಿತ ಸಂಶೋಧನೆ, ಗುಣಮಟ್ಟದ ಶಿಕ್ಷಣ ಮತ್ತು ಪರಿಣಾಮಕಾರಿ ವಿಸ್ತರಣಾ ಚಟುವಟಿಕೆಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ವಿಶೇಷಾಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾ. ಕೆ.ಎಂ.ಹರಿಣಿ ಕುಮಾರ್ ಅವರ ಕೊಡುಗೆಯನ್ನು ವಿಶ್ವವಿದ್ಯಾಲಯದ ಎಲ್ಲಾ ಸಿಬ್ಬಂದಿ ಮನಪೂರ್ವಕವಾಗಿ ಸ್ಮರಿಸಿ ಪ್ರಸಂಶಿಸಿದರು.

ಡಾ. ಕೆ.ಎಂ.ಹರಿಣಿಕುಮಾರ್ ಅವರು ವಿಶೇಷಾಧಿಕಾರಿಯಾಗಿ ಕಾರ್ಯಾನಿರ್ವಹಿಸಿದ ಅವಧಿಯಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯದ ಸ್ಥಾಪನೆಗೆ ದೃಢವಾದ ಅಡಿಪಾಯವನ್ನು ಹಾಕಿದ್ದು, ಆಡಳಿತಾತ್ಮಕ ವ್ಯವಸ್ಥೆ, ಶೈಕ್ಷಣಿಕ ಚಟುವಟಿಕೆಗಳು, ಸಂಶೋಧನೆ ಹಾಗೂ ವಿಸ್ತರಣಾ ಕಾರ್ಯಗಳಿಗೆ ಸ್ಪಷ್ಟ ದಿಕ್ಕು ನೀಡಿದರು. ಅವರ ದೂರದೃಷ್ಟಿ, ಕಾರ್ಯ ಕ್ಷಮತೆ ಮತ್ತು ಸಮರ್ಪಣೆಯಿಂದ ವಿಶ್ವವಿದ್ಯಾಲಯವು ಸುಸಂಘಟಿತವಾಗಿ ರೂಪುಗೊಳ್ಳಲು ಸಾಧ್ಯವಾಯಿತು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಅಧ್ಯಾಪಕರು, ವಿಜ್ಞಾನಿಗಳು ಹಾಗೂ ಸಿಬ್ಬಂದಿವರ್ಗವು ಡಾ. ಕೆ. ಎಂ. ಹರಿಣಿ ಕುಮಾರ್ ಅವರ ಸೇವೆಯನ್ನು ಹೃದಯ ಪೂರ್ವಕವಾಗಿ ಶ್ಲಾಘಿಸಿ, ಅವರ ಮುಂದಿನ ಕಾರ್ಯಗಳಿಗೆ ಶುಭಾಶಯಗಳನ್ನು ಕೋರಿದರು.
ಪಾಲನೆ.ಇನ್ ವಾಟ್ಸ್ ಆಪ್ ಗುಂಪಿಗೆ ಸೇರಿರಿ.


