NEWS

ಜಿಲ್ಲಾಧಿಕಾರಿಗಳ ಕೆ.ಆರ್. ಪೇಟೆ ತಾಲ್ಲೂಕು ಕಚೇರಿಗೆ ಅನಿರೀಕ್ಷಿತ ಭೇಟಿ

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲಾಧಿಕಾರಿಗಳು ಕೆ.ಆರ್. ಪೇಟೆ ತಾಲ್ಲೂಕು ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳನ್ನು ಪರಿಶೀಲಿಸಿ ಕಚೇರಿ ಕಾರ್ಯನಿರ್ವಹಣೆ, ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲಿಸಿದರು. ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಅವುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.

ಇ-ಆಫೀಸ್ ವ್ಯವಸ್ಥೆಯಲ್ಲಿನ ಬಾಕಿ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ ಡಿಜಿಟಲ್ ಕಾರ್ಯವಿಧಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು.

ಆದಾಯ, ಜಾತಿ, ಭೂಹಿಡುವಳಿ, ವಂಶವೃಕ್ಷ, ನಿವಾಸ ಪ್ರಮಾಣಪತ್ರ ಸೇರಿದಂತೆ ಎಲ್ಲಾ ಸೇವೆಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಒದಗಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿ, ವಿಳಂಬ ಕಂಡುಬಂದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಭಿಲೇಖಾಲಯ ಶಾಖೆಯ ದಾಖಲೆ ನಿರ್ವಹಣೆ ಹಾಗೂ ಡಿಜಿಟಲೀಕರಣಕ್ಕೆ ಒತ್ತು ನೀಡಿ, ಸರ್ಕಾರಕ್ಕೆ ನಿಗದಿತ ಶುಲ್ಕವನ್ನು ಕಡ್ಡಾಯವಾಗಿ ವಸೂಲಿಸಿ ದಾಖಲೆಗಳನ್ನು ಸರಿಯಾಗಿ ಸಂರಕ್ಷಿಸುವಂತೆ ಸೂಚಿಸಿದರು.

ಹೋಬಳಿ ಮಟ್ಟದ ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿಯೇ ಲಭ್ಯವಿದ್ದು ಸಾರ್ವಜನಿಕರ ಮನವಿಗಳಿಗೆ ತ್ವರಿತ ಸ್ಪಂದನೆ ನೀಡಬೇಕು, ಕಚೇರಿ ಶಿಸ್ತು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರ್ಕಾರದ ನಿಯಮಾವಳಿ ಪಾಲಿಸಿ ಸಾರ್ವಜನಿಕರಿಗೆ ಸಕಾಲಿಕ ಹಾಗೂ ಗುಣಮಟ್ಟದ ಸೇವೆಗಳನ್ನು ಒದಗಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳು ಸ್ಪಷ್ಟ ನಿರ್ದೇಶನ ನೀಡಿದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಲೋಹಿಯ ಪ್ರಶಸ್ತಿ ಪ್ರದಾನ: ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ಶಿವಾನಂದ ತಗಡೂರು-ಗಣ್ಯರ ಶ್ಲಾಘನೆ

ಮೋದಿ ಅದ್ಭುತ ನಾಯಕ: ಭಾರತದೊಂದಿಗೆ ‘ವ್ಯಾಪಾರ ಒಪ್ಪಂದ’ಕ್ಕೆ ಟ್ರಂಪ್ ವಿಶ್ವಾಸ

ಗುಂಡ್ಲುಪೇಟೆ, ಮೈಸೂರಿನಲ್ಲಿ ನಾಗರಹೊಳೆ, ಬಂಡಿಪುರ ಸಫಾರಿ ಪುನಾರಂಭಕ್ಕೆ ರೈತರಿಂದ ವಿರೋಧ

Leave a Comment