NEWS

37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ: 2026

ಪಾಲನೆ ನ್ಯೂಸ್

ಮಂಡ್ಯ: 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ–2026ರ ಅಂಗವಾಗಿ ಹಮ್ಮಿಕೊಳ್ಳಲಾದ ಬೃಹತ್ ಕಾಲ್ನಡಿಗೆ ಜಾಥಾ ಮತ್ತು ಸೈಕಲ್ ಜಾಥಾವನ್ನು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆಯ ಮಹತ್ವವನ್ನು ವಿವರಿಸಿ ಮಾತನಾಡಿದ ಅವರು, ಅತಿವೇಗ, ಮದ್ಯಪಾನ ಮಾಡಿ ವಾಹನ ಚಾಲನೆ, ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸದೇ ಚಾಲನೆ ಮಾಡುವುದು ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದು ತಿಳಿಸಿದರು. ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ರಸ್ತೆ ಅಪಘಾತಗಳಿಂದ ಉಂಟಾಗುವ ಜೀವಹಾನಿ ಹಾಗೂ ಆಸ್ತಿ ನಷ್ಟವನ್ನು ತಡೆಯಲು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರೂ ಸಂಚಾರ ನಿಯಮಗಳನ್ನು ಪಾಲಿಸುವುದು, ರಸ್ತೆ ಸುರಕ್ಷತೆಯನ್ನು ಕಾಪಾಡುವುದು ಹಾಗೂ ಅಪಘಾತ ರಹಿತ ಸಮಾಜ ನಿರ್ಮಾಣಕ್ಕೆ ಸಹಕರಿಸುವುದು ಎಂಬ ಪ್ರತಿಜ್ಞೆಯನ್ನು ಸ್ವೀಕರಿಸಿದರು.

ಬೃಹತ್ ಕಾಲ್ನಡಿಗೆ ಜಾಥ – ವಾಕಥಾನ್  ಮತ್ತು ಸೈಕಲ್ ಜಾಥಾ ಜಿಲ್ಲಾಧಿಕಾರಿಗಳ ಕಚೇರಿಯಿಂದ ಸಂಜಯ ಟಾಕೀಸ್ ವೃತ್ತದವರಿಗೆ ತಲುಪಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಆನಂದ್ ಎಮ್,  ಪ್ರಾದೇಶಿಕ ಸಾರಿಗೆ ಅಧಿಕಾರಿ ಟಿ.ಜೆ. ಹೇಮಾವತಿ, ಪ್ರಾದೇಶಿಕ ಸಾರಿಗೆ ಕಛೇರಿಯ ನಿವೃತ್ತ ಅಧಿಕ್ಷಕರು ಎಂ.ಜಿ. ಏನ್. ಪ್ರಸಾದ್, ಸ್ಕೌಟ್ ಅಂಡ್ ಗೈಡ್ ನ ಮುಖ್ಯಸ್ಥರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭಾರತ ಕಿರುಚಿತ್ರ ಸ್ಪರ್ಧೆ-2026

ಯಾವುದೇ ಸಮಸ್ಯೆ ಸಂಘರ್ಷದಿಂದ ಬಗೆಹರಿಯದು: ಮೋದಿ

‘ ಭಾರತ ಟಿ- 20 ವಿಶ್ವಕಪ್ ಸೆಮಿಫೈನಲ್‌ಗೆ ಪ್ರವೇಶ ಅಸಾಧ್ಯ’

Leave a Comment