ಇಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬಾಲ್ಯವಿವಾಹದ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಹಾಗೂ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಪಾಲನೆ ನ್ಯೂಸ್

ಮಂಡ್ಯ: ಈ ಜಾಥಾದಲ್ಲಿ ಜಿಲ್ಲಾ ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು. ಬಾಲ್ಯವಿವಾಹವು ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯಕ್ಕೆ ಗಂಭೀರ ಹಾನಿಯನ್ನುಂಟುಮಾಡುವುದರಿಂದ, ಅದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಾದ ಅಗತ್ಯವಿದೆ ಎಂಬ ಸಂದೇಶವನ್ನು ಜಾಥಾ ಮೂಲಕ ಸಾರಲಾಯಿತು.
ಕಾರ್ಯಕ್ರಮದ ಅಂತ್ಯದಲ್ಲಿ ಭಾಗವಹಿಸಿದ ಎಲ್ಲರೂ “ ಬಾಲ್ಯವಿವಾಹವನ್ನು ಮಾಡಿಸದೇ, ಕಂಡರೆ ತಡೆದು, ಮಕ್ಕಳ ಹಕ್ಕುಗಳನ್ನು ರಕ್ಷಿಸುತ್ತೇವೆ” ಎಂಬ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಬಾಲ್ಯವಿವಾಹ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕನ ಸಹಕಾರ ಅತ್ಯಗತ್ಯವೆಂದು ಈ ಸಂದರ್ಭದಲ್ಲಿ ಮನವಿ ಮಾಡಲಾಯಿತು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
