ಸಾಮಾಜಿಕ ಪಿಡುಗನ್ನು ಹೋಗಲಾಡಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ
ಪಾಲನೆ ನ್ಯೂಸ್
ಮಂಡ್ಯ: ಬಾಲ್ಯವಿವಾಹ ಮುಕ್ತ ಮಂಡ್ಯ ಜಿಲ್ಲೆಯ ಅಭಿಯಾನದ ಅಂಗವಾಗಿ, ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬಾಲ್ಯವಿವಾಹದ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಹಾಗೂ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಲ್ಯ ವಿವಾಹ ಒಂದು ಸಾಮಾಜಿಕ ಪಿಡುಗು ಬಾಲ್ಯ ವಿವಾಹ ಮುಕ್ತ ಜಿಲ್ಲೆಯಾಗಿ ಮಾಡುವುದು ಸಾರ್ವಜನಿಕರ ಹೊಣೆಗಾರಿಕೆಯಾಗಿದೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹವು ಕಳೆದ ಮೂರು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ 14 ಕ್ಕೆ ಇಳಿಕೆ ಯಾಗಿದೆ ಬಾಲ್ಯ ವಿವಾಹ ಮುಕ್ತ ಜಿಲ್ಲೆಯಾಗಿ ಮಾಡಬೇಕು ಎಂದು ಹೇಳಿದರು.
ಹೆಣ್ಣಿಗೆ ಸ್ನಾನಮಾನ ಕೊಡುವುದರಿಂದ ಜಿಲ್ಲಾ ಅಭಿವೃದ್ಧಿಯಾಗಲು ಸಾಧ್ಯ. ಕಾನೂನು ಉಲ್ಲಂಘನೆ ಆಗದಂತೆ ನೋಡಿಕೊಳ್ಳವುದರ ಜೊತೆ ಮಾನವೀಯತೆ ಹೃದಯವಂತಿಕೆಯನ್ನು ಬೆಳೆಸಿಕೊಳ್ಳಬೇಕು. ಅನಕ್ಷರತೆ ಸಾಂಪ್ರದಾಯಿಕ ಮೂಡನಂಬಿಕೆಗಳನ್ನು ಹೋಗಲಾಡಿಸಬೇಕು ಎಂದು ತಿಳಿಸಿದರು
ಈ ಜಾಥಾದಲ್ಲಿ ಜಿಲ್ಲಾ ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು. ಬಾಲ್ಯವಿವಾಹವು ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯಕ್ಕೆ ಗಂಭೀರ ಹಾನಿಯನ್ನುಂಟು ಮಾಡುವುದರಿಂದ, ಅದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಾದ ಅಗತ್ಯವಿದೆ ಎಂಬ ಸಂದೇಶವನ್ನು ಜಾಥಾ ಮೂಲಕ ಸಾರಲಾಯಿತು.

ಕಾರ್ಯಕ್ರಮದ ಅಂತ್ಯದಲ್ಲಿ ಭಾಗವಹಿಸಿದ ಎಲ್ಲರೂ “ ಬಾಲ್ಯವಿವಾಹವನ್ನು ಮಾಡಿಸದೇ, ಕಂಡರೆ ತಡೆದು, ಮಕ್ಕಳ ಹಕ್ಕುಗಳನ್ನು ರಕ್ಷಿಸುತ್ತೇವೆ” ಎಂಬ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಬಾಲ್ಯವಿವಾಹ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕನ ಸಹಕಾರ ಅತ್ಯಗತ್ಯವೆಂದು ಈ ಸಂದರ್ಭದಲ್ಲಿ ಮನವಿ ಮಾಡಲಾಯಿತು.
ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಆನಂದ್ ಎಮ್, ಪೊಲೀಸ್ ಅಧೀಕ್ಷಕರಾದ ಶೋಭಾರಾಣಿ ವಿ. ಜೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್, ಹಿರಿಯ ನ್ಯಾಯಾಧೀಶರು ಹರಿಣಿ, ನಳಿನಿ, ಮದ್ದೂರಿನ ತಹಸೀಲ್ದಾರ್ ರವರು ಉಪಸ್ಥಿರಿದ್ದರು.
ಪಾಲನೆ.ಇನ್ ವಾಟ್ಸ್ ಆಪ್ ಗುಂಪಿಗೆ ಸೇರಿರಿ.


