ತಾಲೂಕು-ಗ್ರಾಪಂ ಮಟ್ಟದಲ್ಲೂ ನೋಂದಣಿಗೆ ಅವಕಾಶ ಕಲ್ಪಿಸಲು ಜಿಪಂ ಸಿಇಒ ಸೂಚನೆ
ಪಾಲನೆ ನ್ಯೂಸ್
ಮಂಡ್ಯ: ಉದ್ಯೋಗಾಕಾಂಕ್ಷಿಗಳಿಗೆ ಆಸಕ್ತಿದಾಯಕ ಉದ್ಯೋಗಗಳಲ್ಲಿ ಅವಕಾಶ ಕಲ್ಪಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಫೆಬ್ರವರಿ ತಿಂಗಳಲ್ಲಿ ಆಯೋಜಿಸಲಾಗಿದೆ ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ತಿಳಿಸಿದರು.
ನಗರದ ಜಿಪಂ ಮಿನಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಅಂಗವಾಗಿ ಆಯೋಜಿಸಿದ್ದಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಸ್ಥಳೀಯ ಮತ್ತು ಮೈಸೂರು, ಬೆಂಗಳೂರು ಕಂಪನಿಗಳಿಗೆ ಹೆಚ್ಚು ಒತ್ತು ನೀಡಲು ಆಯೋಜಿಸಿರುವ ಮೇಳದಲ್ಲಿ ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡು ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.
ಮಂಡ್ಯ ಬಾಲಕರ ಪದವಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗ ಮೇಳ ಆಯೋಜಿಸಲಾವುದು. ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಕೌಶಲ್ಯಯುತ ಯುವ ಜನರಿಗೆ ಉದ್ಯೋಗ ಕಲ್ಪಿಸಬೇಕು. ಮೇಳ ಆಯೋಜನೆ ಕುರಿತು ಹೆಚ್ಚು ಪ್ರಚಾರ ನೀಡಬೇಕು ಎಂದು ಹೇಳಿದರು.
ಉದ್ಯೋಗ ಮೇಳ ಕುರಿತು ಆಟೋ ಪ್ರಚಾರ, ಬ್ಯಾನರ್, ಕರಪತ್ರ, ದೂರದರ್ಶನ ಹಾಗೂ ಸರ್ಕಾರಿ ಕಚೇರಿಗಳಲ್ಲಿನ ಆವರಣದಲ್ಲಿ ಜಾಹೀರಾತು ಫಲಕ ಹಾಕಬೇಕು. ಸೋಶಿಯಲ್ ಮಿಡಿಯಾ ಮೂಲಕ ಪ್ರಚಾರ ಪಡಿಸಬೇಕು. ಮೇಳದಲ್ಲಿ ಭಾಗವಹಿಸುವ ಎಲ್ಲ ಉದ್ಯೋಗ ಆಕಾಂಕ್ಷಿಗಳಿಗೆ ಸೂಕ್ತ ಮಾಹಿತಿಯೊಂದಿಗೆ ಆಕಾಂಕ್ಷಿಗಳ ಅರ್ಹತೆಯ ಅನುಗುಣವಾಗಿ ಉದ್ಯೋಗ ಕಲ್ಪಿಸಬೇಕು ಎಂದು ತಿಳಿಸಿದರು.
ಜಿಲ್ಲೆಗೆ ಸೀಮಿತವಾಗದೇ ಬೇರೆ ಸ್ಥಳಗಳಲ್ಲಿಯೂ ಉದ್ಯೋಗ ಸಿಕ್ಕರೆ ಅಲ್ಲಿ ಹೋಗಿ ಕೆಲಸ ಮಾಡುವಂತೆ ಸ್ಥಳೀಯ ಅಧಿಕಾರಿಗಳು ಅರಿವು ಮೂಡಿಸಬೇಕು. ಉದ್ಯೋಗಕಾಂಕ್ಷಿಗಳು ಮೇಳವನ್ನು ಪ್ರಯೋಜನ ಪಡೆಯಲು ಶಾಲಾ ಕಾಲೇಜು, ಪ್ರಾಂಶುಪಾಲರಿಗೆ ಉದ್ಯೋಗ ಪೂರ್ವ ತಯಾರಿ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಧನುಷ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ರೂಪಶ್ರೀ, ನಬಾರ್ಡ್ ನ ಅಧಿಕಾರಿ ಹರ್ಷಿತಾ, ಕೌಶಲ್ಯ ಅಭಿವೃದ್ಧಿ ಇಲಾಖೆ ಅಧಿಕಾರಿ ನಾಗಾನಂದ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಬಾಬಾ ಸಾಹೇಬ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ವಿ.ಎಸ್.ಅಶೋಕ್, ಡಿಡಿಪಿಐ ಲೋಕೇಶ್, ಪ್ರಸನ್ನ ಕುಮಾರ್, ವಿ.ಸಿ.ಫಾರಂನ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮುಖ್ಯಸ್ಥ ಡಾ.ಕಮಲಾ ಬಾಯಿ ಕೂಡಗಿ, ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಟಿ.ದಿನೇಶ್ ಉಪಸ್ಥಿತರಿದ್ದರು.
ಪಾಲನೆ.ಇನ್ ವಾಟ್ಸ್ ಆಪ್ ಗುಂಪಿಗೆ ಸೇರಿರಿ.


