NEWS

6 ವರ್ಷದ ಬಾಲಕಿ ಹತ್ಯೆ: ಗ್ರಾಪಂ ಚುನಾವಣೆ ಹುಚ್ಚು

ಪಾಲನೆ ನ್ಯೂಸ್

ಮುಂಬೈ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ 6 ವರ್ಷದ ಮಗಳನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಕಾಲುವೆಗೆ ನೂಕಿ ಹತ್ಯೆ ಮಾಡಿದ್ದಾನೆ.

ಕೊಲೆಯಾದ ಬಾಲಕಿಯನ್ನು ಪ್ರಾಚಿ (6) ಎಂದು ಹಾಗೂ ಕರುಳ ಕುಡಿಯನ್ನೆ ಕೊಂದ ಪಾಪಿ ತಂದೆಯನ್ನು ಪಾಂಡುರಂಗಕೊಂಡಂಗಳೆ(28) ಎಂದು ಗುರುತಿಸಲಾಗಿದೆ. ಈತ ನಾಂದೇಡ್ ಜಿಲ್ಲೆಯ ಮುಖೇಡ್ ತಾಲ್ಲೂಕಿನ ಕೆರೂರ್ ನಿವಾಸಿಯಾಗಿದ್ದು, ಗ್ರಾಮದಲ್ಲಿ ಸೆಲೂನ್ ನಡೆಸುತ್ತಿದ್ದ. ಆರೋಪಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.

ನಿಜಾಮಾಬಾದ್ ಪೊಲೀಸರು ಆರೋಪಿ ಪಾಂಡು ರಂಗ ಮತ್ತು ಗ್ರಾಮದ ಸರಪಂಚ್ ಗಣೇಶ್ ರಾಮ ಚಂದ್ರ ಶಿಂಧೆಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿ ಸಿರುವ ನಿಜಾಮಾಬಾದ್ ಪೊಲೀಸ್ ಆಯುಕ್ತ ಪಿ. ಸಾಯಿ ಚೈತನ್ಯ, ಕೆಲವು ದಿನಗಳ ಹಿಂದೆ ಯೆಡಪಲ್ಲಿಯ ನಿಜಾಮ ಸಾಗರ್ ಕಾಲುವೆಯಲ್ಲಿ ಬಾಲಕಿಯ ಶವ ಪತ್ತೆ ಯಾಗಿತ್ತು. ಪೊಲೀಸರು ಆಕೆಯ ತಂದೆಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ತನಿಖಾಧಿಕಾರಿ ವಿಚಾರಣೆ ನಡೆಸಿದಾಗ, ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.

ಕೊಲೆಗೆ ಸಂಚು: ಗ್ರಾಮದಲ್ಲಿ ಸೆಲೂನ್ ನಡೆಸುತ್ತಿದ್ದ ಪಾಂಡುರಂಗ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದ. ಅವನಿಗೆ ಮೂರು ವರ್ಷದ ಗಂಡು ಮಗು ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು. ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡು ಮಕ್ಕಳ ನಿಯಮ ಇರುವುದರಿಂದ ಸ್ಪರ್ಧಿಸಲು ಅನರ್ಹನಾಗಿದ್ದ. ಹೀಗಾಗಿ ಕೊಲೆಗೆ ಸಂಚು ರೂಪಿಸಿದ್ದ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ರೈಲುಹಳಿ ಮೇಲೆ ಕೆಟ್ಟು ನಿಂತ ಬಿಎಂಟಿಸಿ

ಮೋದಿ ಅದ್ಭುತ ನಾಯಕ: ಭಾರತದೊಂದಿಗೆ ‘ವ್ಯಾಪಾರ ಒಪ್ಪಂದ’ಕ್ಕೆ ಟ್ರಂಪ್ ವಿಶ್ವಾಸ

ಓದಿನೊಂದಿಗೆ ಭಾಷೆಯ ಹಿಡಿತವಿದ್ದಲ್ಲಿ ಸಾಧನೆಗೆ ಪ್ರೇರಣೆ

Leave a Comment