NEWS

2000 ಬೋಧಕ ಹುದ್ದೆ ಭರ್ತಿಗೆ ಅಸ್ತು

ನೇರ ನೇಮಕಾತಿಯಡಿ ಖಾಲಿ ಸ್ಥಾನಗಳನ್ನು ತುಂಬಲು ಆರ್ಥಿಕ ಇಲಾಖೆ ಹಸಿರು ನಿಶಾನೆ

ಪಾಲನೆ ನ್ಯೂಸ್

ಪ್ರಥಮ ದರ್ಜೆ, ಪಾಲಿಟೆಕ್ನಿಕ್, ಬಿಇ ಕಾಲೇಜುಗಳಲ್ಲಿರುವ ಹುದ್ದೆಗಳು ಇವು ಕಾಲೇಜು- ತಾಂತ್ರಿಕ ಶಿಕ್ಷಣ ಇಲಾಖೆ ಪ್ರಸ್ತಾವನೆಗೆ ಸರ್ಕಾರದ ಅನುಮತಿ

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ (ಯುವಿಸಿಇ) ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ.

ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್‌ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್ ಕಾಲೇಜುಗಳಿಗೆ 186 ಸಹಾಯಕಪ್ರಾಧ್ಯಾಪಕಹುದ್ದೆಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು ಸೇರಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ ಒಟ್ಟು 2000 ಹುದ್ದೆಗಳ ಭರ್ತಿಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇದಕ್ಕೆ ಆರ್ಥಿಕ ಇಲಾಖೆಯ ಸಲಹೆಗಳನ್ವಯ ನೇಮಕಾತಿಗೆ ಷರತ್ತು ಬದ್ದ ಅನುಮತಿ ನೀಡಿ ಇಲಾಖೆಯ ಉಪ ಕಾರ್ಯದರ್ಶಿ ಬುಧವಾರ ಆದೇಶ ಮಾಡಿದ್ದಾರೆ.‌

ಕಾಲೇಜು ಹುದ್ದೆ ಹೆಸರು ಸಂಖ್ಯೆ

ಪ್ರಥಮ ದರ್ಜೆ ಸಹಾಯಕ ಪ್ರಾಧ್ಯಾಪಕ 825

ಪಾಲಿಟೆಕ್ನಿಕ್ ಉಪನ್ಯಾಸಕರು 941

ಎಂಜಿನಿಯರಿಂಗ್ ಸಹಾಯಕ ಪ್ರಾಧ್ಯಾಪಕ 186

ಯುವಿಸಿಇ ಬೋಧಕ 47

ಈ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮ ಗಳನ್ವಯ ಅಗತ್ಯ ವಿದ್ಯಾರ್ಹತೆ, ನೇಮಕಾತಿ ವಿಧಾನದಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕು. ಕಲ್ಯಾಣ ಕರ್ನಾಟಕ ವೃಂದಕ್ಕೆ ಮೀಸಲಿರಿಸಿರುವ ಹುದ್ದೆಗಳನ್ನು ನಿಯಮಾನುಸಾರ ವರ್ಗೀಕರಿಸಿ ನೇಮಕಾತಿಗೆ ಕ್ರಮ ವಹಿಸಬೇಕು. ಯುವಿಸಿಇಯ 47 ಹುದ್ದೆಗಳ ಭರ್ತಿಗೆ ಮುನ್ನ ವಿವಿಯಲ್ಲಿ ಖಾಲಿ ಇರುವ 72 ಹುದ್ದೆಗಳ ಬಗ್ಗೆ ಪೂರ್ಣ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕು.ನಂತರ ಸರ್ಕಾರದ ಅನುಮೋದನೆ ಪಡೆದು ಸದರಿ ಹುದ್ದೆಗಳ ಭರ್ತಿ ಮಾಡಬೇಕೆಂದು ಷರತ್ತು ವಿಧೀಸಲಾಗಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಜಾಗೃತ ದಳ ಡಯಾಗೋಸ್ಟಿಕ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ

ಮೆಗಾ ಮೈಲೇಜ್ ಚಾಲೆಂಜ್‌ ಮಾಡಿದ ಯಮಹಾ

“ಅಕ್ಕನ ಬುತ್ತಿ” ಅಡುಗೆ ತಯಾರಿಕಾ ಕೇಂದ್ರದ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿ ಪಂ ಸಿಇಒ

Leave a Comment