NEWS

ಫೆಬ್ರವರಿ ಮಾಹೆಯಲ್ಲಿ ಉದ್ಯೋಗ ಮೇಳ ಜಿಲ್ಲೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ಉದ್ಯೋಗಮೇಳವನ್ನು ಸದುಪಯೋಗಪಡಿಸಿಕೊಳ್ಳಿ – ಕೆ.ಆರ್.ನಂದಿನಿ

ಪಾಲನೆ ನ್ಯೂಸ್

ಮಂಡ್ಯ : ಸ್ಥಳೀಯ ಮತ್ತು ಮೈಸೂರು, ಬೆಂಗಳೂರು ಕಂಪನಿಗಳಿಗೆ ಹೆಚ್ಚು ಒತ್ತು ನೀಡಿ, ಉದ್ಯೋಗ ಆಕಾಂಕ್ಷಿಗಳಿಗೆ ಆಸಕ್ತಿಯುತ ಉದ್ಯೋಗ ಅವಕಾಶಗಳನ್ನು ಕಲ್ಪಿಬೇಕು. ಜಿಲ್ಲೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ಉದ್ಯೋಗ ಮೇಳವನ್ನು ಸದುಪಯೋಗಪಡಿಸಿಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಆರ್. ನಂದಿನಿ ರವರು ತಿಳಿಸಿದರು.


ಫೆಬ್ರವರಿ ಮಾಹೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ “ಉದ್ಯೋಗ ಮೇಳ” ಕುರಿತು ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ
ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಡ್ಯ ಬಾಲಕರ ಪದವಿ ವಿಶ್ವ ವಿದ್ಯಾಲಯದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾವುದು. ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಕೌಶಲಯುತ ಯುವ ಜನರಿಗೆ ಉದ್ಯೋಗ ಕಲ್ಪಿಸಬೇಕು.ಉದ್ಯೋಗ ಮೇಳವನ್ನು ಆಯೋಜನೆ ಕುರಿತು ಹೆಚ್ಚು ಪ್ರಚಾರ ನೀಡಬೇಕು ಎಂದುಹೇಳಿದರು.


ಉದ್ಯೋಗ ಮೇಳ ಕುರಿತು ಆಟೋ ಪ್ರಚಾರ,ಬ್ಯಾನರ್, ಕರಪತ್ರ, ದೂರದರ್ಶನ ಹಾಗೂ ಸರ್ಕಾರಿ ಕಚೇರಿಗಳಲ್ಲಿನ ಆವರಣದಲ್ಲಿ ಜಾಹೀರಾತು ಫಲಕಗಳನ್ನು
ಹಾಕಬೇಕು.ಸೋಶಿಯಲ್ ಮಿಡಿಯಾ ಮೂಲಕ ಪ್ರಚಾರ ಪಡಿಸಬೇಕು ಎಂದು ತಿಳಿಸಿದರು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಎಲ್ಲ ಉದ್ಯೋಗ ಆಕಾಂಕ್ಷಿಗಳಿಗೆ ಸೂಕ್ತ ಮಾಹಿತಿಯೊಂದಿಗೆ ಆಕಾಂಕ್ಷಿಗಳ ಅರ್ಹತೆಯ ಅನುಗುಣವಾಗಿ ಉದ್ಯೋಗವನ್ನು ಕಲ್ಪಿಸಬೇಕು ಎಂದು ಸೂಚಿಸಿದರು.


ಜಿಲ್ಲೆಗೆ ಸೀಮಿತವಾಗದೇ ಬೇರೆ ಸ್ಧಳಗಳಲ್ಲಿಯೂ ಉದ್ಯೋಗ ಸಿಕ್ಕರೆ ಅಲ್ಲಿ ಹೋಗಿ ಕೆಲಸ ಮಾಡುವಂತೆ ಸ್ಥಳೀಯ ಅಧಿಕಾರಿಗಳು ಅರಿವು ಮೂಡಿಸಬೇಕು.
ಜಿಲ್ಲೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ಉದ್ಯೋಗ ಮೇಳವನ್ನು ಸದುಪಯೋಗ ಪಡಿಸಿ ಕೊಳ್ಳಬೇಕು ಎಂದು ಹೇಳಿದರು. ಶಾಲಾ ಕಾಲೇಜು, ಪ್ರಾಂಶುಪಾಲರಿಗೆ
ಉದ್ಯೋಗ ಪೂರ್ವತಯಾರಿ ಬಗ್ಗೆ ಅರಿವು ಮೂಡಿಸುವುದು, ಉದ್ಯೋಗ ಮೇಳದಲ್ಲಿ ವಿವಿಧ ರೀತಿಯ ಉದ್ಯೋಗ ಅವಕಾಶಗಳನ್ನು ಕಲ್ಪಿಸಲಾಗಿದೆ. ಉದ್ಯೋಗ ಆಕಾಂಕ್ಷಿಗಳು ನಿಮ್ಮ ಆಯ್ಕೆಯ ಉದ್ಯೋಗವನ್ನು ಅರಿಸಿಕೊಳ್ಳಬಹುದು ಎಂದು ಹೇಳಿದರು.


ಎಲ್ಲಾ ತಾಲ್ಲೂಕು ಕ್ಷೇತ್ರದಲ್ಲಿ ಉದ್ಯೋಗ ಮೇಳದ ಬಗ್ಗೆ ಜನರಿಗೆ ಮಾಹಿತಿ ದೊರಕುವಂತೆ ತಿಳಿಸಬೇಕು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಎಲ್ಲಾ ಯುವ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಮೇಳದ ಬಗ್ಗೆ ಅರಿವು ಮೂಡಿಸಬೇಕು. ತಾಲ್ಲೂಕು ಮಟ್ಟದಲ್ಲಿ ಉದ್ಯೋಗ ಮೇಳ ಕುರಿತು ಸಭೆ ನಡೆಸಿ ತಾಲ್ಲೂಕು
ಮತ್ತು ಗ್ರಾಮೀಣ ಪಂಚಾಯ್ತಿಗಳಲ್ಲಿ ಉದ್ಯೋಗ ಮೇಳದ ನೊಂದಣಿ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಸೂಚಿಸಿದರು.


ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಯೋಜನಾಧಿಕಾರಿ ಧನುಷ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರೂಪಶ್ರೀ, ನಬಾರ್ಡ್ನ ಅಧಿಕಾರಿ ಹರ್ಷಿತಾ, ಕೌಶಲ್ಯ ಅಭಿವೃದ್ಧಿ ಇಲಾಖೆಯ ಅಧಿಕಾರಿ ನಾಗಾನಂದ, ಪಶು ಸಂಗೋಪನ ಇಲಾಖೆಯ ಉಪನಿರ್ದೇಶಕ ಬಾಬಾಸಾಹೇಬ್, ಕೃಷಿ ಇಲಾಖೆ ಜಂಟಿ ನಿರ್ದೇಶಕರು ಡಾ.ವಿ.ಎಸ್. ಅಶೋಕ್, ಡಿ.ಡಿ.ಪಿ.ಲೋಕೇಶ್, ಪ್ರಸನ್ನಕುಮಾರ್, ವಿ.ಸಿ. ಫಾರಂನ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮುಖ್ಯಸ್ಥರಾದ ಡಾ.ಕಮಲಾ ಬಾಯಿ ಕೂಡಗಿ, ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಟಿ.ದಿನೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕಬ್ಬು ಸರಬರಾಜು ಮಾಡಿದ ರೈತರಿಗೆ ಒಂದು ಬಾರಿ ಆರ್ಥಿಕ ನೆರವು : ಡಾ. ಕುಮಾರ

ಮಾಜಿ ಬ್ಯಾಟ್ಸ್‌ಮನ್ ಸುಬ್ರಮಣಿಯಂ ಬದ್ರಿನಾಥ್ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ

ಗಣ ರಾಜ್ಯೋತ್ಸವದ ಅಂಗವಾಗಿ 34 ತಂಡಗಳಿಂದ ಪಥ ಸಂಚಲನ

Leave a Comment