NEWS

ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿಗಳ ಆದೇಶ

ಪಾಲನೆ ನ್ಯೂಸ್

ಮೈಸೂರು: ಮೈಸೂರು ತಾಲ್ಲೂಕು ಕಸಬಾ ಹೋಬಳಿ, ಮೈಸೂರು ಗ್ರಾಮದ ಸ.ನಂ.87ರಲ್ಲಿ 0.38 ಎಕರೆ/ಗುಂಟೆ ಜಮೀನನ್ನು ಮಾನ್ಯ ಜಿಲ್ಲಾಧಿಕಾರಿಗಳ ಅಧಿಕೃತ ಜ್ಞಾಪಕ ಸಂಖ್ಯೆ : (1): 280/2009-10, 30.08.2010 ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಮೈಸೂರು ರವರಿಗೆ ಮೆಟ್ರಿಕ್ ನಂತರದ ಬಾಲಕಿಯರ/ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡದ ಉದ್ದೇಶಕ್ಕಾಗಿ ಕಾಯ್ದಿರಿಸಿ ಆದೇಶಿಸಲಾಗಿತ್ತು.

ಸದರಿ ಪ್ರದೇಶದಲ್ಲಿ ಅನಧಿಕೃತವಾಗಿ ಸ್ಕೂಟರ್ ಮಾಡುತ್ತಿದ್ದುದರಿಂದ ಸದರಿ ಒತ್ತುವರಿಯನ್ನು ತೆರವು ಮಾಡಿಕೊಡುವಂತೆ ಹಿಂದುದಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು, ಅವರ ಕೋರಿಕೆಯಂತೆ ಹಾಗೂ ಮೇಲಾಧಿಕಾರಿಗಳ ನಿರ್ದೇಶನದಂತೆ ಶುಕ್ರವಾರ ತಹಸಿಲ್ದಾರ್ ಮಹೇಶ್ ಹಾಗೂ ಅಧಿಕಾರಿಗಳ ತಂಡ ಸದರಿ ಪ್ರದೇಶದ ಒತ್ತುವರಿಯನ್ನು ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದಿರುತ್ತಾರೆ.

ಒತ್ತುವರಿ ತೆರವು ಸಂದರ್ಭದಲ್ಲಿ ನಗರ ಮಾಪನ ಇಲಾಖೆಯ ಸಹಾಯಕ ನಿರ್ದೇಶಕ ಚಿಕ್ಕಣ್ಣ, ಹಿಂದುಳಿದ ವರ್ಗಗಳಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ರಾಘವೇಂದ್ರ, ಅರಕ್ಷಕ ನಿರೀಕ್ಷಕ ಯೋಗಾಂಜನಪ್ಪ, ರವಿಶಂಕರ್, ರೋಹಿತ ಅವರುಗಳು ಹಾಜರಿದ್ದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಚಿನ್ನ, ಬೆಳ್ಳಿ ಬೆಲೆ ಇಳಿಕೆ

ಹಮಾಲಿ ಕೂಲಿ ಕಾರ್ಮಿಕರ ಕುಂದುಕೊರತೆಗಳ ಚರ್ಚೆ

ಸಾರಾಯಿ ಕುಡಿಬೇಡ ಎಂದಿದ್ದಕ್ಕೆ 11ರ ಮಗಳನ್ನೇ ಕತ್ತು ಹಿಸುಕಿ ಕೊಂದ ತಾಯಿ!

Leave a Comment