NEWS

ಮಾರ್ಚ್ 7 ರಂದು ಅಸ್ಪೃಶ್ಯತಾ ನಿವಾರಣೆ ಕುರಿತ ವಿಚಾರ ಸಂಕಿರಣ

ಕಾರ್ಯಕ್ರಮದ ಯಶಸ್ವಿಗೆ ಅಧಿಕಾರಿಗಳು ಅಗತ್ಯ ಕ್ರಮವಹಿಸಿ – ಡಾ ಕುಮಾರ

ಪಾಲನೆ ನ್ಯೂಸ್

    ‌ಮಂಡ್ಯ: ಮಾರ್ಚ್ 7 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಅಸ್ಪೃಶ್ಯತೆ ನಿವಾರಣೆ ಕುರಿತು ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಕಾರ್ಯಕ್ರಮ ಉತ್ತಮವಾಗಿ ಆಯೋಜನೆ ಮಾಡಲು ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಳಾದ ಡಾ ಕುಮಾರ ಅವರು ತಿಳಿಸಿದರು.

    ಇಂದು ಜಿಲ್ಲಾಧಿಕಾರಿ ಗಳ ಕಚೇರಿ ಯಲ್ಲಿ ಅಸ್ಪೃಶ್ಯತಾ ನಿವಾರಣೆ ಕುರಿತ ವಿಚಾರ ಸಂಕಿರಣ ಆಯೋಜನೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

    ಅಸ್ಪೃಶ್ಯತಾ ನಿವಾರಣೆ ಕುರಿತ ವಿಚಾರ ಸಂಕಿರಣ ಆಯೋಜನೆಯಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಬೇಕು. ಶಿಷ್ಠಾಚಾರದಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.

    ಅಸ್ಪೃಶ್ಯತಾ ನಿವಾರಣೆ ಕುರಿತ ವಿಚಾರ ಸಂಕಿರಣಗಳು, ಸಮಾಜದಲ್ಲಿನ ಅಸಮಾನತೆ ತೊಡೆದುಹಾಕಲು, ಕಾನೂನು ಅರಿವು ಮೂಡಿಸಲು ಮತ್ತು ತಾರತಮ್ಯದ ವಿರುದ್ಧ ಜಾಗೃತಿ ಮೂಡಿಸಲು ಸಮಾಜ ಕಲ್ಯಾಣ ಇಲಾಖೆ, ಸಂಘಟನೆಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗುವ ಪ್ರಮುಖ ಕಾರ್ಯಕ್ರಮವಾಗಿದೆ ಎಂದು ಅವರು ತಿಳಿಸಿದರು.

    ಸಭೆಯಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಪಿ. ಪ್ರಕಾಶ್, ಸಮಾಜ ಕಲ್ಯಾಣಯ ಉಪ ನಿರ್ದೇಶಕರಾದ ಶ್ರೀನಿವಾಸ್’, ಜಿಲ್ಲಾ ಉಸ್ತುವಾರಿ ಸಚಿವರ ಮಾಧ್ಯಮ ಸಮನ್ವಯಧಿಕಾರಿ ಸೋಮ ಶೇಖರ್ ಕೆರೆಗೋಡು, ಸಂಘಟನಯ ಸಂಚಾಲಕರಾದ ಬಿ. ಟಿ. ವಿಶ್ವನಾಥ್ ಮ, ಗಂಗಾಧರ್ ಹಾಗೂ ವಿಜಯ ಕುಮಾರ್ ಅವರು ಉಪಸ್ಥಿತರಿದ್ದರು.

    ✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
    https://chat.whatsapp.com/H1gUYgrzvnQGZAhIQSGMHn

    Related posts

    ನ್ಯಾಯಮೂರ್ತಿಗಳಿಂದ ಸುರಕ್ಷತಾ ಕ್ರಮಗಳ ಬಗ್ಗೆ ಅರ್ಜಿ ಪರಿಶೀಲನೆ:

    ಖಾಸಗಿ ಹಾಸ್ಟೆಲ್‌ನಲ್ಲಿ ಘಟನೆ 7 ಮಂದಿ ಗಂಭೀರ; ಭದ್ರತಾ ಸಿಬ್ಬಂದಿ ಬೆದರಿಸಿ ಪರಾರಿ

    ಅಖಿಲ ಭಾರತ ಸಾರ್ವತ್ರಿಕ ಮುಷ್ಕರಬೆಂಬಲಿಸಿ ಆಶಾ ಕರ‍್ಯಕರ್ತೆಯರ ಪ್ರತಿಭಟನೆ

    Leave a Comment