NEWS

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತಾತ್ಕಾಲಿಕ ಆಯ್ಕೆ

ಪಾಲನೆ ನ್ಯೂಸ್


ಮೈಸೂರು : ನಂಜನಗೂಡು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇದ್ದ, ಒಟ್ಟು ೦೩ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ೨೬ ಅಂಗನವಾಡಿ ಸಹಾಯಕಿಯರ ಗೌರವಧನ ಸೇವೆಯ ಹುದ್ದೆಗಳ ಭರ್ತಿಗಾಗಿ ನಿಯಮಾನುಸಾರ ಆಯ್ಕೆ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದ್ದು, ಅದರಂತೆ ಅರ್ಜಿದಾರರು ಸಲ್ಲಿಸಿರುವ ದಾಖಲೆಗಳ ಆಧಾರದ ಮೇಲೆ ಅವರ ವಿದ್ಯಾರ್ಹತೆ, ಮೆರಿಟ್ ಹಾಗೂ ಸರ್ಕಾರದ ಆದೇಶದ ನಿಯಮಾವಳಿಯಂತೆ ಸಂಭವನೀಯ/ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ.


ಆಕ್ಷೇಪಣೆಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಫೆಬ್ರವರಿ ೧೬ ರ ಸಂಜೆ ೫.೩೦ ರೊಳಗಾಗಿ ಖುದ್ದಾಗಿ, ಲಿಖಿತವಾಗಿ ಅಗತ್ಯ ಸಮರ್ಥನೀಯ ದಾಖಲೆಗಳೊಂದಿಗೆ
ಕಛೇರಿಗೆ ಸಲ್ಲಿಸಬಹುದಾಗಿದೆ. ನಂತರ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ನಂಜನಗೂಡು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಸನ-ಟೆಲೆಕ್ಸ್ ರವಿಕುಮಾರ್

ಸಮುದಾಯದವರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು: ಡಾ. ಕುಮಾರ

ರತ್ನಾಕರವರ್ಣಿ-ಮುದ್ದಣ್ಣ ಪ್ರಶಸ್ತಿಗೆ ಡಾ.ನೀ.ಗೂ.ರಮೇಶ್‌ ರವರ ” ಗಾಂಧಿಮರ ” ಆಯ್ಕೆ

Leave a Comment