ಪಾಲನೆ ನ್ಯೂಸ್
ಬೆಂಗಳೂರು: ಭಾರತ ಮತ್ತು ಅಮೆರಿಕ
ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಸಂಪೂರ್ಣ ಶರಣಾಗಿ ದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯ ರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ ಪಾಲಿಗೆ ಮರಣ ಶಾಸನ ಆಗಲಿರುವುದು ಖಂಡಿತ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಎರಡು ದೇಶಗಳ ನಡುವಿನ ಸಂಬಂಧಗಳು ಸಮಾನತೆ ಮತ್ತು ಪರಸ್ಪರ ಗೌರವದ ಬುನಾದಿ ಯ ಮೇಲೆ ಸ್ಥಾಪನೆಯಾಗಬೇಕಾ ಗುತ್ತದೆ. ಅದು ಒತ್ತಡ, ಬೆದರಿಕೆ ಮತ್ತು ಏಕಪಕ್ಷೀಯ ನೀತಿ-ನಿರ್ಧಾರ ಗಳ ಹೇರಿಕೆಯಿಂದ ನಡೆಯ ಬಾರದು. ಆದರೆ ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದಿ ರುವ ರುವತಿ ವಿಧಿ-ವಿಧಾನಗಳನ್ನು ಗಮನಿಸಿದರೆ ಇದು ಒಡೆಯನ ಆಜ್ಞೆಗೆ ಸೇವಕ ತಲೆಯಾಡಿಸಿದಂತಿದೆ.

ಸಂಪೂರ್ಣವಾಗಿ ಶರಣಾಗತಿಯಾಗಿರುವ ಈ ಒಪ್ಪಂದಕ್ಕೆ ಭಾರತೀಯರ ಹಿತರಕ್ಷಣೆಯ ಉದ್ದೇಶ ಖಂಡಿತ ಇಲ್ಲ. ಅಮೆರಿಕದ ನ್ಯಾಯಾ ಲಯದಲ್ಲಿ ಎದುರಿಸುತ್ತಿರುವ ಮೋದಿಯವರ ಉದ್ಯಮ ಸ್ನೇಹಿತ ಅದಾನಿ ಅವರ ರಕ್ಷಣೆ ಮತ್ತು ಜೆಫ್ರಿ ಎಪಿಸ್ಟೀನ್ ಫೈಲ್ಸ್‌ನಲ್ಲಿ ಕಾಣಿಸಿಕೊಂಡಿರುವ ಪ್ರಧಾನಿ ಮೋದಿ ಮತ್ತು ಸಂಪುಟದ ಸದಸ್ಯರ ಹೆಸರುಗಳಿಂದಾಗಿ ಸೃಷ್ಟಿಯಾಗಿರುವ ಒತ್ತಡದ ಭಾಗವಾಗಿ ಕೇಂದ್ರ ಸರ್ಕಾರ ದೇಶ ವಿರೋಧಿ ಯಾಗಿರುವ ಒಪ್ಪಂದಕ್ಕೆ ಒಪ್ಪಿಕೊಂಡಿದೆ ಎಂಬ ಆರೋಪ ನಿರಾಕರಿಸಲುಸಾಧ್ಯವೇ? ಎಂದಿದ್ದಾರೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
