NEWS

ಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಜಿಲ್ಲಾಧಿಕಾರಿ

ಪಾಲನೆ ನ್ಯೂಸ್

ಮಂಡ್ಯ : ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ಮತ್ತು ಜವಾಬ್ದಾರಿಯನ್ನು ತೆಗೆದುಕೊಂಡು ಕೆರೆ ಒತ್ತುವರಿಯನ್ನು ತೆರವುಗೊಳಿಸಬೇಕು, ತೆರವುಗೊಳಿಸಿದ ಕೆರೆಗಳು ಮತ್ತೆ ಒತ್ತುವರಿ ಮಾಡದಂತೆ ಸಂರಕ್ಷಣೆ ಮಾಡಬೇಕು, ಕೆರೆ ಒತ್ತುವರಿ ಮಾಡಿದವರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಳಾದ ಡಾ ಕುಮಾರ ಅವರು ಹೇಳಿದರು.

ಇಂದು ಮಂಡ್ಯ ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ತೆರವುಗೊಳಿಸುವ ಸಂಬಂಧ ಜಿಲ್ಲಾಧಿಕಾರಿ ಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಇದುವರೆಗೆ ಸುಮಾರು 245 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಇನ್ನು 203 ಕೆರೆಗಳ ತೆರವು ಬಾಕಿ ಉಳಿದಿದೆ. ಬಾಕಿ ಇರುವ ಕೆರೆ ಒತ್ತುವರಿಗಳನ್ನು ತಕ್ಷಣವೇ ತೆರವುಗೊಳಿಸಿ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದರು.

ಪ್ರತಿ ತಿಂಗಳು ಕೆರೆ ಒತ್ತುವರಿ ಸಂಬಂಧ ಸಭೆ ನಡೆಸಲಾಗುತ್ತಿದ್ದು ಮಾರ್ಚ್ 30 ರೊಳಗೆ ಬಾಕಿ ಇರುವ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೖಗೊಳ್ಳಲಾಗುವುದು ಎಂದು ಅವರು ಜಿಲ್ಲಾಧಿಕಾರಿಗಳು ತಿಳಿಸಿದರು.

ತೆರವುಗೊಳಿಸಿದ ಕೆರೆಗಳ ಸುತ್ತ ಟ್ರಂಚ್‌ಗಳನ್ನು (ಕಂದಕ) ನಿರ್ಮಿಸಿ, ನಾಮಫಲಕಗಳನ್ನು ಅಳವಡಿಸುವ ಮೂಲಕ ಮರು-ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಎಚ್.ಎಲ್.ಬಿ.ಸಿ, ಕಾವೇರಿ ನೀರಾವರಿ ನಿಗಮ ನಿಯಮಿತ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಕೆರೆಯನ್ನು ಸಂರಕ್ಷಿಸಬೇಕು. ನಿಯಮಿತವಾಗಿ ಕೆರೆಗಳ ಪರಿಶೀಲನೆ ನಡೆಸಿ ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಮಂಡ್ಯ ಉಪ ವಿಭಾಗಧಿಕಾರಿ ಶಿವಮೂರ್ತಿ, ಪಾಂಡವಪುರ ಉಪ ವಿಭಾಗಧಿಕಾರಿ ಶ್ರೀನಿವಾಸ್ ಡಿಡಿಎಲ್ ಆರ್ ವಿರುಪಾಕ್ಷ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಇರಾನ್‌ಗೆ ಅಮೆರಿಕ ಅಧ್ಯಕ್ಷರ ಎಚ್ಚರಿಕೆ

ಭಾರತಕ್ಕೆ 300 ರನ್ ಟಾರ್ಗೆಟ್ ಕೊಟ್ಟರೂ ಕಡಿಮೆಯೇ: ಮಿಚೆಲ್ ಸ್ಯಾಂಟ್ಸರ್

ಸರ್ಕಾರದ ಭಾಷಣಕ್ಕೆ ಕೊಕ್: ತಾವೇ ಸಿದ್ಧಪಡಿಸಿದ ಭಾಷಣ ಓದಿ ಹೊರನಡೆದ ರಾಜ್ಯಪಾಲ

Leave a Comment