ಪೌತಿ ಖಾತೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಗ್ರಾಮ ಅಡಳಿತಾಧಿಕಾರಿಗಳಿಗೆ ಅಭಿನಂದನೆ
ಪಾಲನೆ ನ್ಯೂಸ್
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಈ ಪೌತಿ ಖಾತೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ 35 ಗ್ರಾಮ ಆಡಳಿತಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ಮೆಚ್ಚುಗೆ ವ್ಯಕ್ತಪಡಿಸಿ ಗ್ರಾಮ ಆಡಳಿತಾಧಿಕಾರಿಗಳಿಗೆ ಅಭಿನಂದನಾ ಪತ್ರ ನೀಡಿದರು.

ಜಮೀನಿನ ಪೌತಿ ಖಾತೆ ಪ್ರಕ್ರಿಯೆಯನ್ನು ತಾವು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ನಿಗದಿತ ಸಮಯದಲ್ಲಿ ಕೆಲಸ ಮಾಡಿದ ಗ್ರಾಮ ಆಡಳಿತಾಧಿಕಾರಿಗಳಿಗೆ ಜನಪರ ಸೇವೆ ಮತ್ತು ಕರ್ತವ್ಯ ನಿಷ್ಠೆಗೆಯ ಶ್ಲಾಘನೆ ವ್ಯಕ್ತಪಡಿಸಿದರು.
ಇ–ಪೌತಿ’ ಖಾತೆ ಆಂದೋಲನ ತ್ವರಿತಗೊಳಿಸಿ

ಮೃತರ ಹೆಸರಿನಲ್ಲಿರುವ ಜಮೀನುಗಳನ್ನು ವಾರಸುದಾರರಿಗೆ ಖಾತೆ ಮಾಡಿಕೊಡುವ ‘ಇ–ಪೌತಿ’ ಖಾತೆ ಆಂದೋಲನ ತ್ವರಿತ ಗತಿಯಲ್ಲಿ ಸಾಗಬೇಕು ಎಂದು ಅವರು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.
ಸರ್ಕಾರದ ಸೂಚನೆಗಳನ್ನು ಪಾಲಿಸಬೇಕು. ಜನರನ್ನು ಕಚೇರಿಗಳಿಗೆ ಅಲೆದಾಡಿಸುವ ಪ್ರವೃತ್ತಿ ಸರಿಯಲ್ಲ. ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಖಾತೆ ಮಾಡುವಾಗ ತಾಂತ್ರಿಕ ಸಮಸ್ಯೆ ಎದುರಾದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಕೆಲಸದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಲಾಗುವುದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಂಡ್ಯ ಉಪ ವಿಭಾಗಧಿಕಾರಿಗಳಾದ ಎಂ. ಶಿವಮೂರ್ತಿ, ಪಾಂಡವಪುರ ಉಪ ವಿಭಾಗಧಿಕಾರಿ ಶ್ರೀನಿವಾಸ್ ಹಾಗೂ ಎಲ್ಲಾ ತಾಲ್ಲೂಕಿನ ತಹಶೀಲ್ದಾರ್ ಉಪಸ್ಧಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
