ಪಾಲನೆ ನ್ಯೂಸ್
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ ಯುವಜನತೆಯೂ ಕಾಯಕ ಶರಣರ ಆದರ್ಶ,ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಬಿ.ವಿ ನಂದೀಶ್ ರವರು ಹೇಳಿದರು.


ಮಂಡ್ಯ: ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಡ್ಯ ಇವರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ನಡೆದ ಕಾಯಕ ಶರಣರ ಜಯಂತಿ (ಮಾದರ ಚೆನ್ನಯ್ಯ ಮಾದರ ಧೂಳಯ್ಯ ಡೋಹರ ಕಕ್ಕಯ್ಯ ಸಮಗಾರ ಹರಳಯ್ಯ ಉರಿಲಿಂಗ ಪೆದ್ದಿ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ 12 ನೇ ಶತಮಾನದಲ್ಲಿ ಸಾಮಾಜಿಕ ಸುಧಾರಣೆಗಳನ್ನು ಮಾಡಿದ್ದಾರೆ. ಶರಣರು ಅನ್ನ ದಾಸೋಹ ಮತ್ತು ಕಾಯಕ ದಾಸೋಹವನ್ನು ಆರಾಧಿಸುತ್ತಿದ್ದರು.ಯುವಸಮುದಾಯವು ಶರಣರ ಆದರ್ಶಗಳನ್ನುಬೆಳಸಿಕೊಳ್ಳಬೇಕು ಮತ್ತು ಸಮುದಾಯಕ್ಕೆ ಮಾದರಿಯಾಗುವಂತಹ ಕಾರ್ಯಗಳನ್ನು ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೆಂಗಳೂರಿನ ಪರಿಶಿಷ್ಟ ಜಾತಿ ಹಾಗೂ ಪಂಗಡ ಆಯೋಗದ ಮಾಜಿ ಸದಸ್ಯರಾದ ವೆಂಕಟೇಶ್ ದೊಡ್ಡೇರಿ,
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಾದ ಬಿ.ಎಸ್ ಅನುಪಮ, ಮುಖಂಡರುಗಳಾದ ಎಲ್ .ಸಂದೇಶ್, ಕೃಷ್ಣ, ತಮ್ಮಣ್ಣ, ಸಿ.ಕೆ ಪಾಪಯ್ಯ ಎನ್ .ಆರ್ ಚಂದ್ರಶೇಖರ್, ಕೆಂಪಣ್ಣ ಹಾಗೂ ಇನ್ನಿತರರು ಭಾಗವಹಿಸಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
