ಪಾಲನೆ ನ್ಯೂಸ್
ಮದ್ದೂರು : ಅಂಡರ್ ಪಾಸ್ ಸೇತುವೆಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ನಿರ್ವಾಹಕ ಸೇರಿದಂತೆ 18 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಟ್ಟಣದ ಕೆ.ಕೋಡಿಹಳ್ಳಿ ಬಳಿ ಬೆಂಗಳೂರು -ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.
ಬೆಂಗಳೂರು ಕಡೆಯಿಂದ ವಿರಾಜ ಪೇಟೆಯ ಕಡೆಗೆ ಹೋಗುತ್ತಿದ್ದ ಬಸ್‌ನ ಸ್ಟೇರಿಂಗ್ ಲಾಕ್ ಆದ ಹಿನ್ನೆಲೆಯಲ್ಲಿ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ನಾಗಮ್ಮ, ಪೂಜಾ, ಶಿಲ್ಪಾ, ಜಯಮ್ಮ, ಲತಾ, ಇಂಪನಾ, ನಾಗರಾಜು, ರಂಗಪ್ಪ ಸೇರಿದಂತೆ 18 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರಲ್ಲಿ ಜಯಮ್ಮ ಎಂಬವರ ತಲೆಗೆ ಪೆಟ್ಟಾಗಿರುವ ಹಿನ್ನೆಲೆಯಲ್ಲಿ ಅವರನ್ನು ಮಂಡ್ಯದ ಮಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಉಳಿದವರಿಗೆ ಮದ್ದೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಘಟನೆಯಿಂದ ಸುಮಾರು 1 ಕಿ. ಮೀ.ವರೆಗೆ ಸಂಚಾರ ಅಸ್ತವ್ಯಸ್ತವಾಗಿತ್ತು, ಬಳಿಕ ಘಟನಾ ಸ್ಥಳಕ್ಕೆ ಪಟ್ಟಣ ಸಂಚಾರ ಠಾಣೆ ಪೊಲೀಸರು ಆಗಮಿಸಿ ಅಪಘಾತ ವಾಗಿದ್ದ ಬಸ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
