NEWS

ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅಭಿನಂದನಾ ಗ್ರಂಥ ಲೋಕಾರ್ಪಣೆ, ಸಾವಯವ ಸಂತೆ, ವಧುವರರ ಅನ್ವೇಷಣೆ ಫೆ.14‌

ಪಾಲನೆ ನ್ಯೂಸ್

ಮಂಡ್ಯ: ಬೆಂಗಳೂರು ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ಒಕ್ಕಲಿಗ ಯುವ ಬ್ರಿಗೇಡ್‌ನಿಂದ ಭೈರವೈಕ್ಯ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಅಭಿನಂದನಾ ಗ್ರಂಥ ಲೋಕಾರ್ಪಣೆ ಮತ್ತು ನಾನಾ ಸಾಮಾಜಿಕ ಸೇವಾಕಾರ್ಯಗಳನ್ನು ಫೆ.14 ಮತ್ತು 15ರಂದು ಮಠದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಯುವ ಬ್ರಿಗೇಡ್‌ನ ಜಿಲ್ಲಾಧ್ಯಕ್ಷ ಬಸವರಾಜ್ ತಿಳಿಸಿದರು.

ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಕಾಠ್ಯಕ್ರಮದ ಸಾನ್ನಿಧ್ಯ ವಹಿಸುವರು. ಸಾವಯವ ಸಂತೆ, ವಿಜ್ಞಾನ ಮತ್ತು ತಂತ್ರಜ್ಞಾನ ವಸ್ತು ಪ್ರದರ್ಶನ, ಉಚಿತ ಆರೋಗ್ಯ ತಪಾಸಣಾ ಶಿಬಿರ, ಎಲ್ಲ ಸಮುದಾಯಗಳ ವಧು-ವರರ ಮುಖಾಮುಖಿ ಅನ್ವೇಷಣೆ ಹಾಗೂ ಮಲೆನಾಡು ಗಿಡ್ಡ ತಳಿ ಹಸುಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದರು.

ಉದ್ಘಾಟನಾ ಸಮಾರಂಭ ಫೆ.14ರ ಬೆಳಗ್ಗೆ 10ಕ್ಕೆ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ನಾನಾ ಮಠಾಧೀಶರ ಸಾನ್ನಿಧ್ಯದಲ್ಲಿ ನಡೆಯಲಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡ ಉದ್ಘಾಟಿಸಲಿದ್ದು, ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅಧ್ಯಕ್ಷತೆ ವಹಿಸುವರು. ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸಂಸ್ಮರಣ ಗ್ರಂಥ ಲೋಕಾರ್ಪಣೆ ಮಾಡಲಿದ್ದು, ಕುಣಿಗಲ್ ಶಾಸಕ ಮಲೆನಾಡು ಗಿಡ್ಡಗಳ ವಿತರಣೆ ಮಾಡುವರು. ಬೇಲೂರು ಶಾಸಕ ಹುಲ್ಲಹಳ್ಳಿ ಸುರೇಶ್ ಸಾವಯವ ಸಂತೆಯನ್ನು, ಮಾಜಿ ಸಚಿವ, ಶಾಸಕ ಎಸ್.ಟಿ.ಸೋಮಶೇಖರ್ ಆರೋಗ್ಯ ತಪಾಸಣಾ ಶಿಬಿರ, ಮಂಡ್ಯ ಶಾಸಕ ಪಿ. ರವಿಕುಮಾರ್ ಗೌಡ ಅವರು ರಾಜ್ಯ ಮಟ್ಟದ ಸರ್ವ ಜನಾಂಗದ ವಧು-ವರರ ಸಮಾವೇಶ ಉದ್ಘಾಟಿಸಲಿದ್ದಾರೆ. ವೇದಿಕೆಯಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂಕೇಗೌಡರನ್ನು ಇದೇ ವೇಳೆ ಸನ್ಮಾನಿಸಲಾಗುವುದು ಎಂದು ಹೇಳಿದರು.

ಸಮಾರೋಪ ಸಮಾರಂಭ ಫೆ.15ರಂದು ಸಂಜೆ 5ಕ್ಕೆ ನಡೆಯಲಿದ್ದು, ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ನಾನಾ ಮಠಾಧೀಶರ ಸಾನ್ನಿಧ್ಯ ವಹಿಸುವರು.

ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಅವರು ಕಂದಾಯ ಕಳಕಳಿ ಆವೃತ್ತಿ-2 ಕೃತಿ ಲೋಕಾರ್ಪಣೆ ಮಾಡುವರು. ಕೃತಿಯ ಕುರಿತು ವರಪ್ರಸಾದ್ ರೆಡ್ಡಿ ಮಾತನಾಡುವರು. ಸಂಸದ ಡಾ.ಸಿ.ಎನ್.ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದು, ಹಲವು ಗಣ್ಯರು ಭಾಗವಹಿಸಲಿದ್ದಾರೆ. ಮಹಾರಾಷ್ಟ್ರ ಮ್ಯಾರಿಟೈಮ್‌ನ ಸಿಇಒ ಪ್ರದೀಪ್ ಪ್ರಭಾಕ‌ರ್ ಅವರನ್ನು ಇದೇ ವೇಳೆ ಸನ್ಮಾನಿಸಲಾಗುವುದು ವಿವರಿಸಿದರು. ಎಂದು

ಗೋಷ್ಠಿಯಲ್ಲಿ ಯುವ ಬ್ರಿಗೇಡ್‌ ಮಹಿಳಾ ಜಿಲ್ಲಾಧ್ಯಕ್ಷೆ ಸುಶ್ಮಿತಗೌಡ, ಮಹಿಳಾ ಸಂಘಟನಾ ಪೋಷಕರಾದ ಡಿ.ಸಿ.ರಾಜೇಂದ್ರ ಪ್ರಸಾದ್, ವೆಂಕಟೇಶ್ ಹಾಜರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಶೀಘ್ರದಲ್ಲೇ ಜಿಲ್ಲಾ ಮಟ್ಟದ ಉದ್ಯೋಗ ಮೇಳ: ಕೆ.ಆರ್.ನಂದಿನಿ

ಗ್ರಾಮ ಪಂಚಾಯತ್ ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವರು

ನೂತನ ಸಿಎಂ ಆಗಿ ಜೋಸೆಫ್ ವಿಜಯ್ ಪ್ರಮಾಣ ವಚನ

Leave a Comment