NEWS

ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಹೆಲಿ ಟೂರಿಸಂ ಆರಂಭಿಸುವ ಸಂಬಂಧ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಪಾಲನೆ ನ್ಯೂಸ್

ಮಂಡ್ಯ: ಪರಿಶೀಲನೆ ಸಂದರ್ಭದಲ್ಲಿ ಹೆಲಿಪ್ಯಾಡ್ ವ್ಯವಸ್ಥೆಗೆ ಅಗತ್ಯವಿರುವ ಸ್ಥಳದ ಲಭ್ಯತೆ ಹಾಗೂ ಸೂಕ್ತತೆ, ಸುರಕ್ಷತಾ ಮಾನದಂಡಗಳ ಪಾಲನೆ, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ವಾಹನ ನಿಲುಗಡೆ ವ್ಯವಸ್ಥೆ, ಸಂಚಾರ ನಿರ್ವಹಣೆ, ತುರ್ತು ವೈದ್ಯಕೀಯ ಸೇವೆಗಳ ಸಿದ್ಧತೆ ಹಾಗೂ ಅಗ್ನಿಶಾಮಕ ವ್ಯವಸ್ಥೆಗಳ ಸೌಲಭ್ಯತೆ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು.

ಸರ್ಕಾರದ ಮಾರ್ಗಸೂಚಿ ಹಾಗೂ ಸಂಬಂಧಿತ ಇಲಾಖೆಗಳ ನಿಯಮಾನುಸಾರ ಅಗತ್ಯ ಅನುಮತಿಗಳನ್ನು ಪಡೆದು ಮುಂದಿನ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ದರ ಏರಿಸುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಮೇಲುಕೋಟೆಗೆ ಹರಿದು ಬಂದ ಭಕ್ತ ಸಾಗರ

ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025

Leave a Comment