NEWS

ಆಧಾ‌ರ್ ಬದಲು ಸ್ಮಾರ್ಟ್‌ ಕಾರ್ಡ್

ಉಚಿತ ಬಸ್‌ ಫಲಾನುಭವಿ ಸ್ತ್ರೀಯರು ಈ ಕಾರ್ಡ್ ತೋರಿಸಬೇಕು

ಪಾಲನೆ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಅನುಷ್ಠಾನಗೊಳಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರಕಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಯಲ್ಲಿ ಸಚಿವ ಎಚ್‌.ಕೆ. ಪಾಟೀಲ ಅವರು ಈ ಮಾಹಿತಿ ನೀಡಿದರು. ಸದ್ಯ ಶಕ್ತಿ ಯೋಜನೆಯಲ್ಲಿ ಆಧಾರ್ ಕಾರ್ಡ್ ಅಥವಾ ಉಚಿತ ಪ್ರಯಾಣ ನಮ್ಮ ಪ್ರಮಾಣ ಮಹಿಳೆಯರಿಗೆ ಬಸ್ ಸಂಚಾರ ಉಚಿತ ಸರ್ಕಾರದ ಸರ್ಕಾರ ನೀಡಿರುವ ಇನ್ಯಾವುದೇ ಅಧಿಕೃತ ಗುರುತಿನ ಚೀಟಿ ತೋರಿಸಿ ರಾಜ್ಯ ಸಾರಿಗೆಯ ಸಾಮಾನ್ಯ ದರದ ಬಸ್ಸುಗಳಲ್ಲಿ ಸಂಚರಿಸಲು ಮಹಿಳೆಯರಿಗೆ ಅವಕಾಶ ನೀಡಲಾಗಿದೆ.

ಈ ಯೋಜನೆಯನ್ನು ಮತ್ತಷ್ಟು ಸಮರ್ಪಕ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳಿಸುವ ದೃಷ್ಟಿಯಿಂದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಟ್ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಗುಜರಾತ್ ನ ಅಹಮದಾಬಾದ್‌ನಲ್ಲಿ ಐಪಿಎಲ್ 2026ರ ಫೈನಲ್ ಪಂದ್ಯ

ಸಂಸದ ಯದುವೀ‌ರ್ ಮನವಿಗೆ ನಿರ್ಮಲಾ ಸ್ಪಂದನೆ

ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ. 25ರಷ್ಟು ತೆರಿಗೆ: ಟ್ರಂಪ್ ಎಚ್ಚರಿಕೆ

Leave a Comment