NEWS

ಮಂಡ್ಯ – ಮೈಸೂರು ಬಸ್ ವ್ಯವಸ್ಥೆ ಕಲ್ಪಿಸಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಿ

ಯುವ ನಿಧಿ ಯೋಜನೆ ಕುರಿತು ಸೂಚನ ಫಲಕಗಳನ್ನು ಅಳವಡಿಸಿ -ಚಿಕ್ಕಲಿಂಗಯ್ಯ

ಪಾಲನೆ ನ್ಯೂಸ್

ಶಕ್ತಿ ಯೋಜನೆಯಡಿ ಮಂಡ್ಯ ಘಕಟದ ಬಸ್ ಗಳನ್ನು ಮೈಸೂರು – ಮಂಡ್ಯ ಮಾರ್ಗ ಬಿಡಿ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಮಂಡ್ಯದಿಂದ ಮೈಸೂರಿಗೆ ತೆರಳುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಬೇರೆ ಜಿಲ್ಲೆಯ ಘಟಕದ ವೇಗದೂತ ಬಸ್ ಗಳನ್ನು ಜಿಲ್ಲೆಯಗೆ ಬಿಡುವಂತೆ ಸೂಚಿಸಿದರು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಅವರು ಹೇಳಿದರು.

ಮಂಡ್ಯ ಫೆ.13 ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಕ್ತಿ ಯೋಜನೆಯಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮಂಡ್ಯ ಯಿಂದ ಮೈಸೂರಿಗೆ ಪ್ರತಿ 15 ನಿಮಿಷಕ್ಕೆ ಬಸ್ಸುಗಳನ್ನು ಬಿಡುವಂತೆ ಮತ್ತು ರಾತ್ರಿ 7 ರಿಂದ 9 ಗಂಟೆ ವೇಳೆಯಲ್ಲಿ ಪ್ರಯಾಣಿಸುವಾಗ ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಸ್ಸುಗಳನ್ನು ಬಿಡುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಅವರು ಹೇಳಿದರು.

ಅನ್ನಸುವಿಧ ಯೋಜನೆಯ ಮೂಲಕ 75 ವರ್ಷ ಮೇಲ್ಪಟ್ಟವರಿಗೆ ಈಗಾಗಲೇ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಕೆಲವರ ಬಳಿ ಮೊಬೈಲ್ ಇಲ್ಲದ ಕಾರಣ ಓಟಿಪಿ ಪಡೆದು ಪಡಿತರ ತಲುಪಿಸಲು ಸಾಧ್ಯವಾಗುತ್ತಿಲ್ಲ.ಮಾನವಿಯತೆ ದೃಷ್ಟಿಯಿಂದ ವಯಸ್ಕರಿಗೆ ಪಡಿತರವನ್ನು ನೀಡಿ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಯುವನಿಧಿ ಯೋಜನೆಯ ಕುರಿತಾಗಿ ಹೆಚ್ಚಿನ ಪ್ರಚಾರ ಕೈಗೊಳ್ಳಿ. ಎಲ್ಲಾ ಕಾಲೇಜುಗಳಲ್ಲಿ ಯುವನಿಧಿ ಯೋಜನೆ ಕುರಿತು ಸೂಚನಾ ಫಲಕಗಳನ್ನು ಅಳವಡಿಸಿ ಅರಿವು ಮೂಡಿಸಿ ಎಂದು ಹೇಳಿದರು.

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಯುವ ಜನತೆಗೆ ಅರಿವು ಮೂಡಿಸುವಂತಹ ತರಬೇತಿ ಕಾರ್ಯಗಾರವನ್ನು ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪ್ರಶಾಂತ್ ಬಾಬು ಅವರು ಮಾತನಾಡಿ
ಅನ್ನಭಾಗ್ಯ ಯೋಜನೆಯಲ್ಲಿ ಫಲಾನುಭವಿಯು ಮರಣ ಹೊಂದಿದ ನಂತರ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಣಿಯನ್ನು ರದ್ದು ಮಾಡುಬೇಕು ತಿಳಿಸಿದರು.

ಜಿಲ್ಲೆಯಲ್ಲಿ ತಾಲೂಕುವಾರು ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮರಣ ಹೊಂದಿದ ಫಲಾನುಭವಿಗಳ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಹೇಳಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ರಾಜೇಂದ್ರ ಎಸ್.ಹೆಚ್ ಅವರು ಮಾತನಾಡಿ ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 200 ಯೂನಿಟ್ ಬಳಸುವಂತಹ ಫಲಾನುಭವಿಗಳನ್ನು ಗುರುತಿಸಿ ಗೃಹ ಜ್ಯೋತಿಯ ಸದ್ಬಳಕೆ ಕುರಿತು ಪರಿಶೀಲಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 200 ಯೂನಿಟ್ ಬಳಸುವ ಫಲಾನುಭವಿಗಳು 3 % ಅಂದರೆ 15000 ಕುಟುಂಬಗಳು ಇರುವುದಾಗಿ ತಿಳಿಸಿದರು. ಹೊಸ ಮನೆಗಳಿಗೆ ಸರ್ಕಾರದ ನಿಯಮದಂತೆ ಕಡ್ಡಾಯವಾಗಿ 58 ಯೂನಿಟ್ ಗಳನ್ನು ನೀಡುವುದಾಗಿ ಹೇಳಿದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಶಿವಣ್ಣ, ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಕೆ ಹನುಮಂತಯ್ಯ,ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಧನುಷ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸದಸ್ಯರುಗಳಾದ ಅಜಯ್ ಕುಮಾರ್ ಬಿ.ಪಿ, ಎ.ಬಿ ಕುಮಾರ, ಕೆ. ರುದ್ರಪ್ಪ, ವೀಣಾ ,ಶಂಕರೇಗೌಡ, ಬಸವರಾಜು, ಮಹಮದ್ ಅನ್ಸರ್, ರಮೇಶ್ ಬಿ.ಎಂ, ಪಿ ಮಾದೇಶ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರನ್ನು ಕಂಡು ಡಿಸಿಎಂ ಡಿಕೆಶಿ ಸಿಡಿಮಿಡಿ

ಸಫಾರಿ ವೇಳೆ ಮೊಬೈಲ್ ಫೋನ್ ಬಳಕೆಗೆ ಕಟ್ಟುನಿಟ್ಟಿನ ನಿಯಂತ್ರಣ

ಎಐ ಹೊಡೆತಕ್ಕೆ ಐಟಿ ಆದಾಯ ಕುಂಟಿತ

Leave a Comment