NEWS

ಮಲೆಮಹದೇಶ್ವರ ಬೆಟ್ಟದಲ್ಲಿ ಬಸ್‌ಗಳ ಮುಖಾಮುಖಿ ಡಿಕ್ಕಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಲನೆ ನ್ಯೂಸ್

ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್ ಟಿಸಿ ಬಸ್‌ ಹಾಗೂ ಮಲೆಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದತ್ತ ಬರುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕ ವೆಂಕಟೇಶ್, ಚಾಲಕ ಹನುಮಂತಪ್ಪ ಫಕೀರಪ್ಪ, ಖಾಸಗಿ ಬಸ್ ಚಾಲಕ ಚಂದ್ರಶೇಖರ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇವರನ್ನು ಮೈಸೂರಿನ ಕೆ.ಆ‌ರ್. ಆಸ್ಪತ್ರೆಗೆ ಕಳುಹಿಸಲಾಗಿದೆ. ಉಳಿದಂತೆ ಬಸ್ಸಿನಲ್ಲಿದ್ದ ರಾಮನಗರದ ಶಿವಮ್ಮ, ಅಭಿಷೇಕ್, ಧನರಾಜು, ಸ್ವಾಮಿ, ಚಂದ್ರಶೇಖರ್ ತಲಕಾಡು ಸಮೀಪದ ಕಾಳಿ ಹುಂಡಿ ಗ್ರಾಮದ ನಿವಾಸಿ ತಲ್ವಾರ್ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಘಟನೆ ವಿವರ: ಮಹದೇಶ್ವರ ಬೆಟ್ಟದಿಂದ ರಾಮನಗರಕ್ಕೆ ತೆರಳುತ್ತಿದ್ದ ಜೈಮಾರುತಿ ಎಂಬ ಹೆಸರಿನ ಖಾಸಗಿ ಬಸ್ ಹಾಗೂ ಮೈಸೂರು ಗ್ರಾಮಾಂತರ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಮೈಸೂರಿನಿಂದ ಮ.ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಹಾಲಳ್ಳ ಸಮೀಪ ಮುಖಾಮುಖಿ ಡಿಕ್ಕಿಯಾಗಿವೆ.

ಘಟನೆಯಲ್ಲಿ ಖಾಸಗಿ ಬಸ್ ಚಾಲಕ ಹಾಗೂ ಹಿಂಬದಿಯಲ್ಲಿ ಕುಳಿತಿದ್ದ ಪ್ರಯಾಣಿಕರಿಗೆ ಗಾಯವಾಗಿದೆ. ತಕ್ಷಣ ಸ್ಥಳೀಯರ ನೆರವಿನಿಂದ ಗಾಯಗೊಂಡಿದ್ದ ಪ್ರಯಾಣಿಕರನ್ನು ಆಂಬ್ಯುಲೆನ್ಸ್ ಮೂಲಕ ಕಳುಹಿಸಿಕೊಟ್ಟಿದ್ದಾರೆ. ಗಾಯಾಳುಗಳಿಗೆ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಟಿ20 ಗೆದ್ದ ಭಾರತದ ಮಹಿಳೆಯರು

ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌

ನಿಖಿಲ್‌ಗೆ ರಾಜಕೀಯ ಯಶಸ್ಸು ಸಿಗಲಿ: ಬಿ.ಆರ್.ರಾಮಚಂದ್ರ

Leave a Comment